ಅಮೃತಸರದಲ್ಲಿ ಗಡಿಯಾಚೆ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲ ಭೇದನೆ: 6 ಮಂದಿ ಬಂಧನ, 7 ಪಿಸ್ತೂಲ್ ವಶ
ಅಮೃತಸರ, 19 ಮಾರ್ಚ್ (ಹಿ.ಸ.): ಆ್ಯಂಕರ್: ಮಹತ್ವದ ಕಾರ್ಯಾಚರಣೆಯಲ್ಲಿ ಪಂಜಾಬ್ ಪೊಲೀಸ್ ಅಮೃತಸರ ಕಮಿಷನರೇಟ್ ಘಟಕವು ಗಡಿಯಾಚೆಗಿನ ಅಕ್ರಮ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲವನ್ನು ಭೇದಿಸಿದೆ. ಈ ಸಂಬಂಧ ಒಬ್ಬ ಬಾಲಾಪರಾಧಿ ಸೇರಿ ಆರು ಮಂದಿಯನ್ನು ಬಂಧಿಸಲಾಗಿದ್ದು, ಅವರಿಂದ ಏಳು ಅತ್ಯಾಧುನಿಕ ಪಿಸ್ತೂಲ್‌ಗಳನ
Arams


ಅಮೃತಸರ, 19 ಮಾರ್ಚ್ (ಹಿ.ಸ.):

ಆ್ಯಂಕರ್:

ಮಹತ್ವದ ಕಾರ್ಯಾಚರಣೆಯಲ್ಲಿ ಪಂಜಾಬ್ ಪೊಲೀಸ್ ಅಮೃತಸರ ಕಮಿಷನರೇಟ್ ಘಟಕವು ಗಡಿಯಾಚೆಗಿನ ಅಕ್ರಮ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲವನ್ನು ಭೇದಿಸಿದೆ. ಈ ಸಂಬಂಧ ಒಬ್ಬ ಬಾಲಾಪರಾಧಿ ಸೇರಿ ಆರು ಮಂದಿಯನ್ನು ಬಂಧಿಸಲಾಗಿದ್ದು, ಅವರಿಂದ ಏಳು ಅತ್ಯಾಧುನಿಕ ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪಂಜಾಬ್ ಡಿಜಿಪಿ ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ವಿದೇಶ ಮೂಲದ ಹ್ಯಾಂಡ್ಲರ್‌ನೊಂದಿಗೆ ಸಂಪರ್ಕದಲ್ಲಿದ್ದು, ಆತ ಪೋರ್ಚುಗಲ್ ನಲ್ಲಿ ಕಾರ್ಯನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಪಾಕಿಸ್ತಾನದಿಂದ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಸಾಗಣೆ ಮಾಡಿ ಭಾರತದಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿಗಳಿಗೆ ಪೂರೈಕೆ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೃತಸರದ ಕ್ಯಾಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಕಳ್ಳಸಾಗಣೆ ಜಾಲದ ಮುಂಚೂಣಿ ಹಾಗೂ ಹಿಂಬದಿಯ ಸಂಪರ್ಕಗಳನ್ನು ಪತ್ತೆಹಚ್ಚಿ ಸಂಪೂರ್ಣ ಜಾಲವನ್ನು ನಾಶಪಡಿಸುವ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ.

ಅಕ್ರಮ ಶಸ್ತ್ರಾಸ್ತ್ರ ಸಾಗಣೆ ಹಾಗೂ ಸಂಘಟಿತ ಅಪರಾಧಗಳ ವಿರುದ್ಧ ಪಂಜಾಬ್ ಪೊಲೀಸ್ ಶೂನ್ಯ ಸಹಿಷ್ಣುತೆಯ ನೀತಿಯನ್ನು ಅನುಸರಿಸುತ್ತಿದ್ದು, ಇಂತಹ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande