ಬಾದಾಮಿಯಲ್ಲಿ ಎಚ್ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ಹೆಣ್ಣು ಮಕ್ಕಳಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಗೆ ಉಚಿತ ಲಸಿಕೆ ವಿತರಣೆಗೆ ಒತ್ತು
ಬಾಗಲಕೋಟೆ, 19 ಮಾರ್ಚ್ (ಹಿ.ಸ.) ಆ್ಯಂಕರ್ : ಹೆಣ್ಣು ಮಕ್ಕಳ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದಿನಿಂದ ಎಚ್ಪಿವಿ (ಗರ್ಭಕಂಠದ ಕ್ಯಾನ್ಸರ್) ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ತಾಲೂಕು ಸಾರ್ವ
ಲಸಿಕೆ


ಬಾಗಲಕೋಟೆ, 19 ಮಾರ್ಚ್ (ಹಿ.ಸ.)

ಆ್ಯಂಕರ್ : ಹೆಣ್ಣು ಮಕ್ಕಳ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದಿನಿಂದ ಎಚ್ಪಿವಿ (ಗರ್ಭಕಂಠದ ಕ್ಯಾನ್ಸರ್) ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿಗಳಾದ ಡಾ. ಎಂ.ಬಿ. ಪಾಟೀಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಹೆಚ್ಚುತ್ತಿರುವ ಗರ್ಭಕಂಠದ ಕ್ಯಾನ್ಸರ್ ಕುರಿತು ಆರೋಗ್ಯ ಜಾಗೃತಿ ಮೂಡಿಸಿದರು.

ಹೆಣ್ಣು ಮಕ್ಕಳ ಆರೋಗ್ಯ ರಕ್ಷಣೆಗಾಗಿ ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರ ಉಚಿತವಾಗಿ ಎಚ್ಪಿವಿ ಲಸಿಕೆ ನೀಡುತ್ತಿದ್ದು, ನಗರ ಹಾಗೂ ಗ್ರಾಮೀಣ ಪ್ರದೇಶಗಳ ಹೆಣ್ಣುಮಕ್ಕಳು ಮುಂಜಾಗ್ರತಾ ಕ್ರಮವಾಗಿ ಈ ಲಸಿಕೆಯನ್ನು ಪಡೆಯಬೇಕು ಎಂದು ಅವರು ತಿಳಿಸಿದರು.

ಈ ಅಭಿಯಾನದ ಅಂಗವಾಗಿ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆ (ಹೊಂಡದ ಶಾಲೆ), ಎಂ.ಎಲ್.ಎಂ.ಪಿ.ಎಸ್ ಶಾಲೆ ಹಾಗೂ ಶ್ರೀ ಬಸವೇಶ್ವರ ಪ್ರೌಢಶಾಲೆಯ ಒಟ್ಟು 27 ಹೆಣ್ಣು ಮಕ್ಕಳಿಗೆ ಲಸಿಕೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ತಜ್ಞ ವೈದ್ಯರಾದ ಡಾ. ಹೂವಪ್ಪ ಗಾಣಿಗೇರ (ಎಂ.ಡಿ., ಫಿಜಿಶಿಯನ್), ಡಾ. ಆರ್.ಸಿ. ನಾಗಾವಿ (ಎಂ.ಎಸ್., ಜನರಲ್ ಸರ್ಜನ್), ಡಾ. ಜ್ಯೋತಿ ಹಳ್ಳಿಕೇರಿ, ಡಾ. ಮಂಜುಳಾ ಗುರಾಣಿ, ಡಾ. ಸವಿತಾ ಕಡೇಮನಿ, ಡಾ. ವೀಣಾ ಕೋರಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಪಿ.ಎಚ್. ಮಹಾಲಿಂಗಪೂರ, ರವಿಗೌಡ ಹೊತಗಿಗೌಡ್ರ, ಜಯಲಕ್ಷ್ಮೀ ಶೆಟ್ಟರ್, ರೀಟಾ ಸಾಲಿನ್ಸ್, ಶಾಂತಾ ಔಬಾಯಿ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ವರ್ಗ ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande