ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ
ವಿಜಯಪುರ, 19 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ನಗರ ಹೊರವಲಯದ ಹಂಚನಾಳ ಕೆರೆಯ ಕಲುಷಿತ ನೀರನ್ನು ಸಂಸ್ಕರಿಸಿ, ಕೆರೆಯನ್ನು ಅಭಿವೃದ್ಧಿಪಡಿಸಿ ಸೌಂದರ್ಯೀಕರಣಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 2025-26ನೇ ಸಾಲಿನಲ್
ಕೆರೆ


ವಿಜಯಪುರ, 19 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ನಗರ ಹೊರವಲಯದ ಹಂಚನಾಳ ಕೆರೆಯ ಕಲುಷಿತ ನೀರನ್ನು ಸಂಸ್ಕರಿಸಿ, ಕೆರೆಯನ್ನು ಅಭಿವೃದ್ಧಿಪಡಿಸಿ ಸೌಂದರ್ಯೀಕರಣಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 2025-26ನೇ ಸಾಲಿನಲ್ಲಿ ಹಂಚನಾಳ ಕೆರೆಯ ಪುನರುಜ್ಜೀವನ ಹಾಗೂ ಸೌಂದರ್ಯೀಕರಣ ಕಾಮಗಾರಿ ಕೈಗೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರು ಇತ್ತೀಚೆಗೆ ನಡೆದ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಸೂಚನೆ ನೀಡಿದ್ದರು.

ಅಲ್ಲದೆ, ಹಾಲಿ ಇರುವ ಎಸ್.ಟಿ.ಪಿಯನ್ನು ಉನ್ನತೀಕರಿಸಿ, ಸಂಸ್ಕರಿಸಿದ ಶುದ್ಧ ನೀರನ್ನು ಮಾತ್ರ ಹಂಚನಾಳ ಕೆರೆಗೆ ಹರಿಸಲು ಕ್ರಮ ವಹಿಸುವಂತೆ ನಿರ್ದೇಶಿಸಿದ್ದರು.

ಸಚಿವರ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ಅದರ ಅಂಗವಾಗಿ ಇಂದು ಹಂಚನಾಳ ಕೆರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಸ್ಥಳ ಪರಿಶೀಲನೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ಕೆರೆಯ ಸುತ್ತಲೂ 30 ಮೀಟರ್ ಅಗಲದ ಬಫರ್ ವಲಯವನ್ನು ಕಡ್ಡಾಯವಾಗಿ ಮೀಸಲಿಡಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು, ನಗರಾಭಿವೃದ್ಧಿ ಪ್ರಾಧಿಕಾರದ ಹಾಗೂ ಮಹಾನಗರ ಪಾಲಿಕೆಯ ತಾಂತ್ರಿಕ ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande