ಬಿಜೆಪಿ ಟಿಕೆಟ್ ಘೋಷಣೆ: ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ರೇಣುಕಾಚಾರ್ಯ
ಬೆಂಗಳೂರು, 19 ಮಾರ್ಚ್ (ಹಿ.ಸ.): ಆ್ಯಂಕರ್: ದಾವಣಗೆರೆ ದಕ್ಷಿಣ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಟಿಕೆಟ್ ಘೋಷಣೆಗೊಂಡಿರುವ ಹಿನ್ನೆಲೆಯಲ್ಲಿ, ಹೈಕಮಾಂಡ್ ತೀರ್ಮಾನವನ್ನು ಸಂಪೂರ್ಣವಾಗಿ ಸ್ವೀಕರಿಸಿ ಪಕ್ಷದ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ
ರೇಣುಕಾಚಾರ್ಯ


ಬೆಂಗಳೂರು, 19 ಮಾರ್ಚ್ (ಹಿ.ಸ.):

ಆ್ಯಂಕರ್:

ದಾವಣಗೆರೆ ದಕ್ಷಿಣ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಟಿಕೆಟ್ ಘೋಷಣೆಗೊಂಡಿರುವ ಹಿನ್ನೆಲೆಯಲ್ಲಿ, ಹೈಕಮಾಂಡ್ ತೀರ್ಮಾನವನ್ನು ಸಂಪೂರ್ಣವಾಗಿ ಸ್ವೀಕರಿಸಿ ಪಕ್ಷದ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.

ಇಂದು ಬೆಂಗಳೂರಿನ ಕುಮಾರ ಕೃಪ ಅತಿಥಿ ಗೃಹದ ಮುಂಭಾಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ವ್ಯಕ್ತಿಗಿಂತ ಪಕ್ಷ ಮುಖ್ಯ. ಒಮ್ಮೆ ಅಭ್ಯರ್ಥಿ ಘೋಷಣೆ ಆದ ಬಳಿಕ ಆ ತೀರ್ಮಾನವನ್ನು ನಾವು ಎಲ್ಲರೂ ಒಪ್ಪಿಕೊಳ್ಳಬೇಕು” ಎಂದು ಸ್ಪಷ್ಟಪಡಿಸಿದರು.

ಅಭ್ಯರ್ಥಿ ಘೋಷಣೆಗೂ ಮೊದಲು ಮಾಜಿ ಮೇಯರ್ ಅಜಯ್ ಕುಮಾರ್ ಅವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾಗಿ ತಿಳಿಸಿದ ಅವರು, “ಅವರು ಕ್ರಿಯಾಶೀಲ ಯುವಕ. 2023ರಲ್ಲಿ ಟಿಕೆಟ್ ಸಿಕ್ಕಿದ್ದರೂ ಕೆಲವು ಕಾರಣಗಳಿಂದ ಹಿಂದೆ ಸರಿದಿದ್ದರು. ಆದರೆ ನಾವು ಲಿಂಗಾಯತ ಎಂಬ ಕಾರಣಕ್ಕೆ ಟಿಕೆಟ್ ಕೇಳಿಲ್ಲ” ಎಂದು ಹೇಳಿದರು.

ಈ ಕುರಿತು ದೆಹಲಿಗೆ ತೆರಳಿ ಬಿಜೆಪಿ ಕೇಂದ್ರ ನಾಯಕರಾದ ರಾಧಾ ಮೋಹನ್ ದಾಸ್ ಅಗರವಾಲ್, ಪ್ರಲ್ಹಾದ್ ಜೋಶಿ,, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಜಗದೀಶ್ ಶೆಟ್ಟರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು ಎಂದು ವಿವರಿಸಿದರು.

“ಹೈಕಮಾಂಡ್ ಈಗ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಟಿಕೆಟ್ ನೀಡಿದೆ. ನಾವು ಅದರ ತೀರ್ಮಾನಕ್ಕೆ ಬದ್ಧರಾಗಿದ್ದೇವೆ. ಎಲ್ಲರೂ ಒಗ್ಗಟ್ಟಾಗಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮಿಸುತ್ತೇವೆ” ಎಂದು ಹೇಳಿದರು.

ಕೆಲವು ಮಾಧ್ಯಮಗಳು ಗುಂಪು ರಾಜಕೀಯದ ಬಗ್ಗೆ ವರದಿ ಮಾಡುತ್ತಿರುವುದನ್ನು ತಳ್ಳಿಹಾಕಿದ ಅವರು, “ನಮ್ಮಲ್ಲಿ ಬಣ ಮುಖ್ಯವಲ್ಲ, ಬಿಜೆಪಿ ಕಮಲದ ಚಿನ್ಹೆಯೇ ಮುಖ್ಯ. ಸಿಹಿ-ಕಹಿ ಎನ್ನುವುದಿಲ್ಲ, ಯಾವ ಪರಿಸ್ಥಿತಿಯನ್ನಾದರೂ ಗೆಲುವಿನತ್ತ ತಿರುಗಿಸುವ ಶಕ್ತಿ ನಮ್ಮ ಕಾರ್ಯಕರ್ತರಲ್ಲಿದೆ” ಎಂದು ಹೇಳಿದರು.

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಪ್ರಜ್ಞಾವಂತ ಮತದಾರರು ಆಯ್ಕೆಮಾಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, 2028ರಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande