
ಚಿತ್ರದುರ್ಗ, 19 ಮಾರ್ಚ್ (ಹಿ.ಸ.):
ಆ್ಯಂಕರ್:
ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ಮಾ.23ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ದೇವರ ದಾಸಿಮಯ್ಯ ಜಯಂತಿ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಯೋಜನಾ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕಾರ್ಯಕ್ಮರ ಉದ್ಘಾಟಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ ಹಾಗೂ ಸಂಸದ ಗೋವಿಂದ ಎಂ ಕಾರಜೋಳ ಘನ ಉಪಸ್ಥಿತಿ ವಹಿಸುವರು.
ಗೌರವಾನ್ವಿತ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ. ಯೋಗೇಶ್ ಬಾಬು, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಪಿ.ರಘು, ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಎಂ.ಚAದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ, ಜಿಲ್ಲಾ ನೇಕಾರರ ಒಕ್ಕೂಟ ಅಧ್ಯಕ್ಷ ಎಂ.ಗೋವಿಂದಪ್ಪ, ಜಿಲ್ಲಾ ನೇಕಾರರ ಒಕ್ಕೂಟ ಕಾರ್ಯದರ್ಶಿ ಎಸ್.ಸುರೇಶ್ ಸೇರಿದಂತೆ ಜಿಲ್ಲೆಯ ಎಲ್ಲಾ ಮಾನ್ಯ ಚುನಾಯಿತ ಜನಪ್ರತಿನಿಧಿಗಳು, ಮಾನ್ಯ ಸದಸ್ಯರುಗಳು, ನಗರಸಭೆ ಹಾಗೂ ನೇಕಾರರ ಸಮಾಜದ ಸಮಸ್ತ ಮುಖಂಡರು ಹಾಗೂ ಗಣ್ಯರು ಭಾಗವಹಿಸುವರು. ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಕನ್ನಡ ಪ್ರಾಧ್ಯಾಪಕಿ ಡಾ.ಗಾಯತ್ರಿ ಉಪನ್ಯಾಸ ನೀಡುವರು, ಭಾಗ್ಯಮ್ಮ ಕೆ.ಹೆಚ್. ಮತ್ತು ತಂಡ ಗೀತಗಾಯನ ನೆಡೆಸಿಕೊಡುವರು ಎಂದು ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa