ಜೆ.ಎಸ್.ಎಸ್. ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ ನೂತನ ಕಟ್ಟಡಕ್ಕೆ ಭೂಮಿಪೂಜೆ
ವಿಜಯಪುರ, 19 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ನಗರದ ಶ್ರೀ ಸಿದ್ದೇಶ್ವರ ಸಂಸ್ಥೆಯ ಶ್ರೀ ಸಿದ್ದೇಶ್ವರ ಲೋಕಕಲ್ಯಾಣ ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ, ನಡೆದಾಡುವ ದೇವರು ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಹೆಸರಿನಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುತ್ತಿರುವ ಜೆ.ಎಸ್.ಎಸ್.
ಭೂಮಿ ಪೂಜೆ


ವಿಜಯಪುರ, 19 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ನಗರದ ಶ್ರೀ ಸಿದ್ದೇಶ್ವರ ಸಂಸ್ಥೆಯ ಶ್ರೀ ಸಿದ್ದೇಶ್ವರ ಲೋಕಕಲ್ಯಾಣ ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ, ನಡೆದಾಡುವ ದೇವರು ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಹೆಸರಿನಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುತ್ತಿರುವ ಜೆ.ಎಸ್.ಎಸ್. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆವರಣದಲ್ಲಿ ಜೆ.ಎಸ್.ಎಸ್. ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ ನೂತನ ಕಟ್ಟಡದ ಭೂಮಿ ಪೂಜೆಯನ್ನು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೆರವೇರಿಸಿದರು.

ನೂತನ ಕಟ್ಟಡ ನಿರ್ಮಾಣದ ಮೂಲಕ ನರ್ಸಿಂಗ್ ಶಿಕ್ಷಣಕ್ಕೆ ಮತ್ತಷ್ಟು ಉತ್ತೇಜನ ದೊರೆಯಲಿದ್ದು, ಆರೋಗ್ಯ ಕ್ಷೇತ್ರಕ್ಕೆ ಸಮರ್ಥ ಮತ್ತು ಸೇವಾ ಭಾವದ ನರ್ಸಿಂಗ್ ವೃತ್ತಿಪರರನ್ನು ರೂಪಿಸಲು ಇದು ಸಹಕಾರಿಯಾಗಲಿದೆ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಸಿದ್ದೇಶ್ವರ ಸಂಸ್ಥೆ ಹಾಗೂ ಲೋಕಕಲ್ಯಾಣ ಚಾರಿಟೇಬಲ್ ಟ್ರಸ್ಟ್ನ ಪದಾಧಿಕಾರಿಗಳು, ಮುಖಂಡರು, ಹಿತೈಷಿಗಳು, ಅಭಿಮಾನಿಗಳು, ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande