
ಚಿತ್ರದುರ್ಗ, 19 ಮಾರ್ಚ್ (ಹಿ.ಸ.):
ಆ್ಯಂಕರ್:
2026ರ ಏಪ್ರಿಲ್ 05ರಂದು ಡಾ.ಬಾಬು ಜಗಜೀವನರಾಂ ಅವರ 119ನೇ ಜನ್ಮ ದಿನಾಚರಣೆ ಹಾಗೂ ಏಪ್ರಿಲ್ 14ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಆಚರಿಸುವ ಸಂಬಂಧ ಇದೇ ಮಾರ್ಚ್ 23ರಂದು ಮಧ್ಯಾಹ್ನ 3ಕ್ಕೆ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಭೆಯ ಅಧ್ಯಕ್ಷತೆ ವಹಿಸುವರು. ಪೂರ್ವಭಾವಿ ಸಭೆಗೆ ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಮುಖ್ಯಸ್ಥರು, ಸಾರ್ವಜನಿಕರು ಭಾಗವಹಿಸಿ, ಸಲಹೆ-ಸೂಚನೆ ನೀಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa