
ವಿಜಯಪುರ, 19 ಮಾರ್ಚ್ (ಹಿ.ಸ.)
ಆ್ಯಂಕರ್ : ಹಿಂದೂಗಳ ಹೊಸ ವರ್ಷ ಯುಗಾದಿ ಅಂಗವಾಗಿ ವಿಜಯಪುರ ನಗರದ ಸಿದ್ಧಸಿರಿ ಮಲ್ಟಿ-ಸ್ಟೇಟ್ ಮಲ್ಟಿ-ಪರ್ಪಸ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ವತಿಯಿಂದ ಸಿದ್ಧಪಡಿಸಲಾದ ಹಿಂದೂ ಕ್ಯಾಲೆಂಡರ್ ಅನ್ನು ನಗರದ ಶ್ರೀ ಸಿದ್ದೇಶ್ವರ ಸಂಸ್ಥೆಯ ಶಿವಾನುಭವ ಮಂಟಪದಲ್ಲಿ ಇಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಡುಗಡೆಗೊಳಿಸಿದರು.
ಯುಗಾದಿ ಹಬ್ಬದ ಸಾಂಸ್ಕೃತಿಕ ಮತ್ತು ಧಾರ್ಮಿಕ ಮಹತ್ವವನ್ನು ಸಾರುವ ಉದ್ದೇಶದಿಂದ ಕ್ಯಾಲೆಂಡರ್ ಬಿಡುಗಡೆ ಮಾಡಲಾಗಿದ್ದು, ಈ ಸಂದರ್ಭ ಕಾರ್ಯಕ್ರಮವು ಸರಳ ಹಾಗೂ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಸೊಸೈಟಿಯ ಹಾಗೂ ಶ್ರೀ ಸಿದ್ದೇಶ್ವರ ಸಂಸ್ಥೆಯ ಪದಾಧಿಕಾರಿಗಳು, ಮುಖಂಡರು, ಹಿತೈಷಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande