ಪ್ರಧಾನಿ ಸೇರಿದಂತೆ ಗಣ್ಯರಿಂದ ಯುಗಾದಿ ಹಬ್ಬದ ಶುಭಾಶಯ
ನವದೆಹಲಿ, 19 ಮಾರ್ಚ್ (ಹಿ.ಸ.): ಆ್ಯಂಕರ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕದ ಸಮಸ್ತ ಸಹೋದರ ಸಹೋದರಿಯರಿಗೆ ಯುಗಾದಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು. “ಹೊಸ ವರ್ಷದ ಆರಂಭವನ್ನು ಸೂಚಿಸುವ ಈ ಪವಿತ್ರ ಹಬ್ಬವು ಹೊಸ ಭರವಸೆ, ನವಚೈತನ್ಯ ಮತ್ತು ಹೊಸ ಆರಂಭಗಳ ಸಂಕೇತವಾಗಿದೆ. ಈ ಶುಭ ಸಂದರ್ಭ
Greetings


ನವದೆಹಲಿ, 19 ಮಾರ್ಚ್ (ಹಿ.ಸ.):

ಆ್ಯಂಕರ್:

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕದ ಸಮಸ್ತ ಸಹೋದರ ಸಹೋದರಿಯರಿಗೆ ಯುಗಾದಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು. “ಹೊಸ ವರ್ಷದ ಆರಂಭವನ್ನು ಸೂಚಿಸುವ ಈ ಪವಿತ್ರ ಹಬ್ಬವು ಹೊಸ ಭರವಸೆ, ನವಚೈತನ್ಯ ಮತ್ತು ಹೊಸ ಆರಂಭಗಳ ಸಂಕೇತವಾಗಿದೆ. ಈ ಶುಭ ಸಂದರ್ಭದಲ್ಲಿ ಭಗವಂತ ಎಲ್ಲರಿಗೂ ಸುಖ, ಶಾಂತಿ, ಸಮೃದ್ಧಿ ಮತ್ತು ಆಯುರಾರೋಗ್ಯವನ್ನು ಕರುಣಿಸಲಿ” ಎಂದು ಹಾರೈಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ ಅವರು ಸಹ ಯುಗಾದಿ ಹಬ್ಬದ ಶುಭಾಶಯಗಳನ್ನು ತಿಳಿಸಿ, “ಕರ್ನಾಟಕದ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಹೊಸ ವರ್ಷವನ್ನು ಸ್ವಾಗತಿಸುವ ಈ ಹಬ್ಬವು ಎಲ್ಲರ ಜೀವನದಲ್ಲಿ ಸಂತೋಷ, ಒಗ್ಗಟ್ಟು ಮತ್ತು ಸಮೃದ್ಧಿಯನ್ನು ತರಲಿ” ಎಂದು ಆಶಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳನ್ನು ಕೋರಿ, ಈ ಹಬ್ಬವು ಎಲ್ಲರ ಜೀವನದಲ್ಲಿ ಸುಖ-ಸಮೃದ್ಧಿ ಮತ್ತು ಶಾಂತಿಯನ್ನು ತರಲೆಂದು ಪ್ರಾರ್ಥಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande