ಯುಗಾದಿ ಪಾಡ್ಯ ಅಂಗವಾಗಿ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ
ವಿಜಯಪುರ, 19 ಮಾರ್ಚ್ (ಹಿ.ಸ.) ಆ್ಯಂಕರ್ : ಯುಗಾದಿ ಪಾಡ್ಯ ಅಂಗವಾಗಿ ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೀ ಸಿದ್ದೇಶ್ವರನಿಗೆ ಹಾಗೂ ಗೋಮಾತೆಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ದೇವಾಲಯ ಆಡಳಿತ ಮಂಡಳಿ ಸದಸ್ಯರು ವಿಶೇಷ ಪೂಜೆ ಸಲ್ಲಿಸಿ, ಹೋಮ-ಹವನ ನೆರವೇರಿಸಿ ನಾಡಿನ
ಪೂಜೆ


ವಿಜಯಪುರ, 19 ಮಾರ್ಚ್ (ಹಿ.ಸ.)

ಆ್ಯಂಕರ್ : ಯುಗಾದಿ ಪಾಡ್ಯ ಅಂಗವಾಗಿ ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೀ ಸಿದ್ದೇಶ್ವರನಿಗೆ ಹಾಗೂ ಗೋಮಾತೆಗೆ

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ದೇವಾಲಯ ಆಡಳಿತ ಮಂಡಳಿ ಸದಸ್ಯರು ವಿಶೇಷ ಪೂಜೆ ಸಲ್ಲಿಸಿ, ಹೋಮ-ಹವನ ನೆರವೇರಿಸಿ ನಾಡಿನ ಒಳಿತು, ಶಾಂತಿ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದರು.

ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆದ ಪೂಜಾ ಕಾರ್ಯಕ್ರಮದಲ್ಲಿ ಭಕ್ತಿಭಾವದ ವಾತಾವರಣ ನಿರ್ಮಾಣವಾಗಿತ್ತು. ನೂತನ ಸಂವತ್ಸರವು ರಾಜ್ಯ ಮತ್ತು ನಾಡಿನ ಜನತೆಗೆ ಸುಖ, ಶಾಂತಿ ಹಾಗೂ ಸಮೃದ್ಧಿಯನ್ನು ತರಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ಸಿದ್ದೇಶ್ವರ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಮುಖಂಡರು, ಹಿತೈಷಿಗಳು ಸೇರಿದಂತೆ ಹಲವರು ಭಾಗಿ ಆಗಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande