ಕೆನಡಾ ಪ್ರಧಾನಿ ಕಾರ್ನಿ ಜೊತೆ ಮೋದಿ ದ್ವಿಪಕ್ಷೀಯ ಮಾತುಕತೆ
ನವದೆಹಲಿ, 02 ಮಾರ್ಚ್ (ಹಿ.ಸ.): ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾಷ್ಟ್ರ ರಾಜಧಾನಿಯ ಹೈದ್ರಾಬಾದ್ ಹೌಸನಲ್ಲಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅವರನ್ನು ಭೇಟಿಯಾಗಿ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಉಭಯ ರಾಷ್ಟ್ರಗಳ ನಡುವಿನ ಇತ್ತೀಚಿನ ರಾಜತಾಂತ್ರಿಕ ಉದ್ವಿಗ್ನತೆಗಳ ಹಿನ್
Meet


ನವದೆಹಲಿ, 02 ಮಾರ್ಚ್ (ಹಿ.ಸ.):

ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾಷ್ಟ್ರ ರಾಜಧಾನಿಯ ಹೈದ್ರಾಬಾದ್ ಹೌಸನಲ್ಲಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅವರನ್ನು ಭೇಟಿಯಾಗಿ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಉಭಯ ರಾಷ್ಟ್ರಗಳ ನಡುವಿನ ಇತ್ತೀಚಿನ ರಾಜತಾಂತ್ರಿಕ ಉದ್ವಿಗ್ನತೆಗಳ ಹಿನ್ನೆಲೆಯಲ್ಲಿ ಈ ಭೇಟಿಗೆ ವಿಶೇಷ ಮಹತ್ವ ಸಿಕ್ಕಿದೆ.

ಸಭೆಯಲ್ಲಿ ಭಾರತ–ಕೆನಡಾ ಸಂಬಂಧಗಳನ್ನು ಮರುಹೊಂದಿಸುವುದು, ವ್ಯಾಪಾರ ಮತ್ತು ಹೂಡಿಕೆ ಸಹಕಾರವನ್ನು ವಿಸ್ತರಿಸುವುದು ಹಾಗೂ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಬಗ್ಗೆ ಚರ್ಚೆ ನಡೆಯಿತು. ಇಂಧನ ಭದ್ರತೆ, ಕೃತಕ ಬುದ್ಧಿಮತ್ತೆ , ಪ್ರಮುಖ ಮತ್ತು ಉದಯೋನ್ಮುಖ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಹಕಾರ ಹೆಚ್ಚಿಸುವ ಅಗತ್ಯವನ್ನು ಉಭಯ ನಾಯಕರು ಒತ್ತಿಹೇಳಿದರೆಂದು ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಕಾರ್ನಿ ಅವರನ್ನು ಭೇಟಿಯಾಗಿ ಪ್ರಾಥಮಿಕ ಮಾತುಕತೆ ನಡೆಸಿದ್ದರು. ದ್ವಿಪಕ್ಷೀಯ ಸಂಬಂಧಗಳ ಸುಧಾರಣೆಗೆ ಹಂತ ಹಂತವಾಗಿ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

ಕೆನಡಾ ಪ್ರಧಾನಿಯವರು ಈ ಮೊದಲು ಮುಂಬಯಿಗೆ ಭೇಟಿ ನೀಡಿ ಪ್ರಮುಖ ಉದ್ಯಮ ವಲಯದ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದ್ದರು. ನಂತರ ಅವರು ದೆಹಲಿಗೆ ಆಗಮಿಸಿ ಅಧಿಕೃತ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande