
ಬೀದರ್, 02 ಮಾರ್ಚ್ (ಹಿ.ಸ.):
ಆ್ಯಂಕರ್:
ಬೀದರ್ ನಗರದ ಬ್ರಿಮ್ಸ್ ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ನಿಲೋಫರ್ ಅವರು ಕೆಲ ಸಿಬ್ಬಂದಿಗಳ ಕಿರುಕುಳದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆಯುತ್ತಿರುವುದು ಅತ್ಯಂತ ನೋವಿನ ವಿಷಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಇಂದು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ ಅವರು, ಈ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಿದ್ದೇನೆ. ಮಹಿಳಾ ಸಿಬ್ಬಂದಿಗಳ ಸುರಕ್ಷತೆ ಹಾಗೂ ಗೌರವದ ವಿಷಯದಲ್ಲಿ ಯಾವುದೇ ನಿರ್ಲಕ್ಷ ಸಹಿಸಲಾಗದು ಎಂದು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa