ಮಾ.5ರಂದು ಧಾರವಾಡದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಸ್ಮರಣಾರ್ಥ ಭೀಮ ಗಾಯನ
ಧಾರವಾಡ, 02 ಮಾರ್ಚ್ (ಹಿ.ಸ.): ಆ್ಯಂಕರ್:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳ ಜಾಗೃತಿಗಾಗಿ ಮಾರ್ಚ್ 5, 2026ರಂದು ಬೆಳಿಗ್ಗೆ 10:30ಕ್ಕೆ ಧಾರವಾಡದ ಅಂಬೇಡ್ಕರ್ ಪಾರಂಪರಿಕ ಕಟ್ಟಡ ಆವರಣದ ಜ್ಞಾನ ಬ
Gayana


ಧಾರವಾಡ, 02 ಮಾರ್ಚ್ (ಹಿ.ಸ.):

ಆ್ಯಂಕರ್:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳ ಜಾಗೃತಿಗಾಗಿ ಮಾರ್ಚ್ 5, 2026ರಂದು ಬೆಳಿಗ್ಗೆ 10:30ಕ್ಕೆ ಧಾರವಾಡದ ಅಂಬೇಡ್ಕರ್ ಪಾರಂಪರಿಕ ಕಟ್ಟಡ ಆವರಣದ ಜ್ಞಾನ ಬುದ್ಧವಿಹಾರದಲ್ಲಿ ಭೀಮ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಘನ ಉಪಸ್ಥಿತಿ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಉದ್ಘಾಟನೆ ನೆರವೇರಿಸಲಿದ್ದು, ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸಲಿದ್ದಾರೆ.

ಶಾಸಕರಾದ ವಿನಯ ಕುಲಕರ್ಣಿ ಸೇರಿದಂತೆ ಹಲವು ಜನಪ್ರತಿನಿಧಿಗಳು, ಮಹಾನಗರ ಮಹಾಪೌರ ಜ್ಯೋತಿ ಪಾಟೀಲ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಪರಿಶಿಷ್ಟ ಜಾತಿಯ ಕಲಾವಿದರನ್ನೊಳಗೊಂಡ ಕಲಾತಂಡಗಳಿಂದ ಭೀಮ ಗಾಯನ ನಡೆಯಲಿದ್ದು, ಸಿದ್ಧಾರ್ಥ ಯುವ ಕ್ರೀಡಾ ಸಾಂಸ್ಕೃತಿಕ ಅಭಿವೃದ್ಧಿ ಸಂಘದ ಕಲಾವಿದರು ಅಂಬೇಡ್ಕರ್ ಅವರ ಸಾಧನೆ, ಸಮಾನತೆ, ಅಸ್ಪೃಶ್ಯತೆ ನಿರ್ಮೂಲನೆ ಮತ್ತು ಸ್ತ್ರೀ ಸಮಾನತೆ ಕುರಿತ ಗೀತೆಗಳನ್ನು ಪ್ರಸ್ತುತಪಡಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಸಾರ್ವಜನಿಕರು ಆಗಮಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾಡಳಿತ ಪ್ರಕಟಣೆಯಲ್ಲಿ ಕೋರಿದೆ

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande