ಮಾ. 6ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್ವ್ಯೂವ್
ಕೊಪ್ಪಳ, 02 ಮಾರ್ಚ್ (ಹಿ.ಸ.) ಆ್ಯಂಕರ್: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್ವ್ಯೂವನ್ನು ಮಾರ್ಚ್ 6 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಈ ವಾಕ್ ಇನ್ ಇಂಟರ್ವ್ಯ
ಮಾ. 6ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್ವ್ಯೂವ್


ಕೊಪ್ಪಳ, 02 ಮಾರ್ಚ್ (ಹಿ.ಸ.)

ಆ್ಯಂಕರ್: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್ವ್ಯೂವನ್ನು ಮಾರ್ಚ್ 6 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.

ಈ ವಾಕ್ ಇನ್ ಇಂಟರ್ವ್ಯೂವ್ನಲ್ಲಿ ಮೆಡ್ಫ್ಲಸ್ ಬೆಂಗಳೂರು ಸಂಸ್ಥೆಯು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳಾದ ಫಾರ್ಮ್ಸಿಸ್ಟ್ (ರಜಿಸ್ರ್ಡ್ ಫಾರ್ಮ್ಸಿಸ್ಟ್ ಕೆಎಸ್ಪಿಸಿ ಇಂದ), ಫಾರ್ಮ್ಸಿಯೇಡ (ಕನಿಷ್ಟ 2 ವರ್ಷ ಮೆಡಿಕಲ್ ಶಾಫ್ನಲ್ಲಿ ಅನುಭವ), ಕಸ್ಟಮರ್ ಸರ್ವೀಸ್ ಅಸೋಶಿಯೇಟ್ಗಳಿಗೆ ನೇರ ಸಂದರ್ಶನ ನಡೆಸಲಿದ್ದಾರೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ. ಡಿ-ಫಾರ್ಮ್, ಬಿ-ಫಾರ್ಮ್ ಇತರೆ ಪದವಿ (ಬಿಇ ಪದವಿ ಹೊರತು ಪಡಿಸಿ) ಅಭ್ಯರ್ಥಿಗಳು ನೇರ ಈ ಸಂದರ್ಶನಕ್ಕೆ ಹಾಜರಾಗಬಹುದು. ಆಸಕ್ತ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಪುರಷರು ಹಾಗೂ ಮಹಿಳೆಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು 2 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ (ರೆಜುಮ್) ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

ಉದ್ಯೋಕಾಂಕ್ಷಿಗಳು https://forms.gle/rSKrLmuqyH8RFgo29 ಮೂಲಕ ರಿಜಿಸ್ಟರ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande