
ದಾವಣಗೆರೆ, 02 ಮಾರ್ಚ್ (ಹಿ.ಸ.):
ಆ್ಯಂಕರ್:
ದಾವಣಗೆರೆ ಜಿಲ್ಲೆಯ
ಚನ್ನಗಿರಿಯ ಜವಳಿ ಸಮುದಾಯ ಭವನದಲ್ಲಿ ಆಯೋಜಿಸಲಾದ ಅಭಿನಂದನಾ ಸಮಾರಂಭದಲ್ಲಿ ಸಂಸದೆ ಪ್ರಭಾ ಮಲ್ಲಿಕಾರ್ಜುನ ಭಾಗವಹಿಸಿ, ಕರ್ನಾಟಕ ಸರ್ಕಾರದಿಂದ ವಿವಿಧ ನಿಗಮ ಮಂಡಳಿಗಳಿಗೆ ನೇಮಕಗೊಂಡಿರುವ ಅಧ್ಯಕ್ಷರು ಹಾಗೂ ನಿಕಟಪೂರ್ವ ಗ್ರಾಮ ಪಂಚಾಯಿತಿ ಮತ್ತು ಪುರಸಭೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜನಸೇವೆಯ ಪಥದಲ್ಲಿ ಹೊಸ ಜವಾಬ್ದಾರಿಗಳನ್ನು ಸ್ವೀಕರಿಸಿರುವ ಎಲ್ಲ ಜನಪ್ರತಿನಿಧಿಗಳಿಗೆ ಶುಭಾಶಯಗಳನ್ನು ತಿಳಿಸಿದರು. ಸರ್ಕಾರದ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಕ್ರಮಗಳು ತಳಮಟ್ಟದ ಜನರಿಗೆ ಸಮರ್ಪಕವಾಗಿ ತಲುಪುವಂತೆ ಶ್ರಮಿಸುವುದು ನಮ್ಮೆಲ್ಲರ ಸಾಮೂಹಿಕ ಹೊಣೆಗಾರಿಕೆಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ಥಳೀಯ ಸಂಸ್ಥೆಗಳು ಹಾಗೂ ನಿಗಮ ಮಂಡಳಿಗಳು ಅಭಿವೃದ್ಧಿಯ ಮಹತ್ವದ ಸ್ತಂಭಗಳಾಗಿದ್ದು, ಜನರ ವಿಶ್ವಾಸಕ್ಕೆ ತಕ್ಕಂತೆ ಪ್ರಾಮಾಣಿಕತೆ, ಪಾರದರ್ಶಕತೆ ಮತ್ತು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಸಮಾರಂಭದಲ್ಲಿ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಮಾಜಿ ಹಾಗೂ ಹಾಲಿ ಸ್ಥಳೀಯ ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa