
ಗದಗ, 02 ಮಾರ್ಚ್ (ಹಿ.ಸ.)
ಆ್ಯಂಕರ್:- ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಮೆಟ್ರಿಕ್ ಪೂರ್ವ (9 ಮತ್ತು 10ನೇ ತರಗತಿ) ಹಾಗೂ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ (ಎಸ್ಸಿ) ವಿದ್ಯಾರ್ಥಿ ವೇತನ ಯೋಜನೆಯಡಿ ಅರ್ಜಿ ಸಲ್ಲಿಸಿರುವ ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಆಧಾರ್ ಆಧಾರಿತ ಬಯೋಮೆಟ್ರಿಕ್ ಇ–ಆಥೆಂಟಿಕೇಶನ್ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ.
ಮೆಟ್ರಿಕ್ ಪೂರ್ವ 9 ಮತ್ತು 10ನೇ ತರಗತಿ ಪರಿಶಿಷ್ಟ ಜಾತಿ (ಎಸ್ಸಿ) ಹಾಗೂ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ (ಎಸ್ಸಿ) ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್ನೊಂದಿಗೆ ಹತ್ತಿರದ ಗ್ರಾಮ್ ಒನ್ ಕೇಂದ್ರ, ಕರ್ನಾಟಕ ಒನ್ ಕೇಂದ್ರ ಅಥವಾ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಎಸ್ಪಿ ಕಚೇರಿ ಎದುರು, ಗದಗ ಕಚೇರಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಇ–ಆಥೆಂಟಿಕೇಶನ್ ಮಾಡಿಸಿಕೊಳ್ಳಬೇಕು.
ಇದಕ್ಕೆ ಜೊತೆಗೆ ಎನ್ಎಸ್ಪಿ ಒಟಿಆರ್ ಪ್ರಕ್ರಿಯೆಯನ್ನೂ ಪೂರ್ಣಗೊಳಿಸುವುದು ಕಡ್ಡಾಯವಾಗಿರುತ್ತದೆ. ವಿದ್ಯಾರ್ಥಿಗಳು ತಮ್ಮ ಮೊಬೈಲ್ನಲ್ಲಿ ಅನ್ನು ಡೌನ್ಲೋಡ್ ಮಾಡಿಕೊಂಡು, ಆಧಾರ್ ಫೇಸ್ ಆಥೆಂಟಿಕೇಶನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು ಎಂದು ಇಲಾಖೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಎಸ್ಪಿ ಕಚೇರಿ ಎದುರು, ಹೊಸ ಬಸ್ ನಿಲ್ದಾಣ ಹಿಂಭಾಗ, ಗದಗ ಕಚೇರಿಯನ್ನು ಸಂಪರ್ಕಿಸಬಹುದಾಗಿದ್ದು, ದೂರವಾಣಿ ಸಂಖ್ಯೆ 08372-297258 ಅನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP