
ನವದೆಹಲಿ, 02 ಮಾರ್ಚ್ (ಹಿ.ಸ.):
ಆ್ಯಂಕರ್:ಮಧ್ಯಪ್ರಾಚ್ಯದಲ್ಲಿ ಮುಂದುವರೆದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕತಾರ್ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿರುವ ಹಿನ್ನೆಲೆಯಲ್ಲಿ ಕತಾರ್ ಏರ್ವೇಸ್ ತನ್ನ ಎಲ್ಲಾ ವಿಮಾನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಿದೆ.
ಕತಾರ್ ನಾಗರಿಕ ವಿಮಾನಯಾನ ಪ್ರಾಧಿಕಾರ ಕತಾರ್ ವಾಯುಪ್ರದೇಶವನ್ನು ಸುರಕ್ಷಿತವಾಗಿ ಪುನಃ ತೆರೆಯುವುದಾಗಿ ಘೋಷಿಸಿದ ಬಳಿಕ ಮಾತ್ರ ವಿಮಾನ ಸೇವೆಗಳು ಪುನರಾರಂಭಗೊಳ್ಳಲಿವೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಮುಂದಿನ ಅಧಿಕೃತ ನವೀಕರಣವನ್ನು ಮಾರ್ಚ್ 03ರಂದು ದೋಹಾ ಸಮಯ ಬೆಳಿಗ್ಗೆ 09:00 ಗಂಟೆಗೆ ನೀಡಲಾಗುವುದು ಎಂದು ತಿಳಿಸಲಾಗಿದೆ. ಈ ನಡುವೆ ಪ್ರಯಾಣಿಕರು ತಮ್ಮ ವಿಮಾನಗಳ ಇತ್ತೀಚಿನ ಮಾಹಿತಿಗಾಗಿ qatarairways.com ವೆಬ್‌ಸೈಟ್ ಅಥವಾ ಕತಾರ್ ಏರ್ವೇಸ್ ಮೊಬೈಲ್ ಅಪ್ಲಿಕೇಶನ್ ಮೂಲಕ ಮೇಲ್ವಿಚಾರಣೆ ಮಾಡಬೇಕೆಂದು ಸೂಚಿಸಲಾಗಿದೆ.
ವಾಯುಪ್ರದೇಶ ಮುಚ್ಚುವಿಕೆಯಿಂದಾಗಿ ಹಲವು ಅಂತಾರಾಷ್ಟ್ರೀಯ ಸಂಪರ್ಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa