ಉರ್ದು ಆಹ್ವಾನ ಪತ್ರಿಕೆ; ಕರವೇ ಆಕ್ರೋಶ
ಬಳ್ಳಾರಿ, 02 ಮಾರ್ಚ್ (ಹಿ.ಸ.) ಆ್ಯಂಕರ್: ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯ ಆಹ್ವಾನ ಪತ್ರಿಕೆಯಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಿ ಉರ್ದು ಭಾಷೆಯಲ್ಲಿ ಆಹ್ವಾನ ಪತ್ರಿಕೆ ಮತ್ತು ಕರಪತ್ರಗಳನ್ನು ಮುದ್ರಣ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ನಗರದಲ್ಲಿ ಸೋಮವಾ
ಉರ್ದು ಆಹ್ವಾನಪತ್ರಿಕೆ;  ಕರವೇ ಆಕ್ರೋಶ


ಉರ್ದು ಆಹ್ವಾನಪತ್ರಿಕೆ;  ಕರವೇ ಆಕ್ರೋಶ


ಬಳ್ಳಾರಿ, 02 ಮಾರ್ಚ್ (ಹಿ.ಸ.)

ಆ್ಯಂಕರ್: ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯ ಆಹ್ವಾನ ಪತ್ರಿಕೆಯಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಿ ಉರ್ದು ಭಾಷೆಯಲ್ಲಿ ಆಹ್ವಾನ ಪತ್ರಿಕೆ ಮತ್ತು ಕರಪತ್ರಗಳನ್ನು ಮುದ್ರಣ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಿದೆ.

ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾಧ್ಯಕ್ಷ ರಾಜಶೇಖರ್ (ರಾಜಣ್ಣ) ಅವರು ಪ್ರತಿಭಟನೆಯ ನೇತೃತ್ವಹಿಸಿ, ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ. ಆದರೂ, ಆರೋಗ್ಯ ಇಲಾಖೆಯಲ್ಲಿ ಇರುವ ಕನ್ನಡ ವಿರೋಧಿಗಳು ಮತ್ತು ಪಟ್ಟಭದ್ರ ಹಿತಾಸಕ್ತಿಗಳನ್ನು ಹೊಂದಿರುವವರು ಉದ್ದೇಶಪೂರ್ವಕವಾಗಿ ಉರ್ದು ಭಾಷೆಯಲ್ಲಿ ಆಹ್ವಾನ ಪತ್ರಿಕೆ ಮತ್ತು ಕರಪತ್ರಗಳನ್ನು ಮುದ್ರಣ ಮಾಡಿಸಿರುವುದು ಖಂಡನೀಯ. ಇಂಥಹಾ ಕನ್ನಡ ವಿರೋಧಿಗಳಿಗೆ ಶಿಕ್ಷೆ ವಿಧಿಸಬೇಕು ಎಂದು ಅವರು ಆಗ್ರಹಿಸಿದರು.

ಬಳ್ಳಾರಿ ಜಿಲ್ಲಾ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಕಟಿಗಿ ಸೂರ್ಯನಾರಾಯಣ, ಮೃತ್ಯುಂಜಯ, ಲಕ್ಷ್ಮಣ್, ನೂರ್ ಭಾಷಾ, ದ್ವಾರಕೇಶ್ ಸೇರಿ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande