ಮಾ.7ರಂದು ಹಾಸನದಲ್ಲಿ ಯುವ ಉದ್ಯೋಗ ಮೇಳ
ಹಾಸನ, 02 ಮಾರ್ಚ್ (ಹಿ.ಸ.): ಆ್ಯಂಕರ್: ಹಾಸನ ಜಿಲ್ಲೆಯ ನಿರುದ್ಯೋಗ ಯುವಕ-ಯುವತಿಯರಿಗಾಗಿ ಮಾರ್ಚ್ 07ರಂದು ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಯುವ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಕರೆ ನೀಡಿದ್ದಾರೆ. ಜಿಲ್ಲಾಡಳಿತ
Dc


ಹಾಸನ, 02 ಮಾರ್ಚ್ (ಹಿ.ಸ.):

ಆ್ಯಂಕರ್:

ಹಾಸನ ಜಿಲ್ಲೆಯ ನಿರುದ್ಯೋಗ ಯುವಕ-ಯುವತಿಯರಿಗಾಗಿ ಮಾರ್ಚ್ 07ರಂದು ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಯುವ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಕರೆ ನೀಡಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ನಡೆಯುವ ಮೇಳದಲ್ಲಿ 100 ಕಂಪನಿಗಳು ಭಾಗವಹಿಸಲಿದ್ದು, ಸುಮಾರು 10,000 ಉದ್ಯೋಗಾವಕಾಶಗಳು ಲಭ್ಯವಿವೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಪದವಿ ಪಡೆದ ಅಭ್ಯರ್ಥಿಗಳು ಅಂಕಪಟ್ಟಿ ಮತ್ತು ಸ್ವವಿವರದೊಂದಿಗೆ ಭಾಗವಹಿಸಬಹುದು. ಆನ್‌ಲೈನ್ ಮುಂಗಡ ನೋಂದಣಿ ವ್ಯವಸ್ಥೆಯೂ ಕಲ್ಪಿಸಲಾಗಿದೆ. ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ನೋಂದಣಿ ನಡೆಯಲಿದೆ.

ಅರ್ಹ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಆದೇಶ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಭಾಗವಹಿಸುವವರಿಗೆ ಊಟ, ಕುಡಿಯುವ ನೀರು ಹಾಗೂ ವೈದ್ಯಕೀಯ ಸೌಲಭ್ಯಗಳ ವ್ಯವಸ್ಥೆ ಇರಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇದೇ ವೇಳೆ, ಮುಸುಕಿನ ಜೋಳದಲ್ಲಿ ಬಿಳಿಸುಳಿ ರೋಗ ಹಿನ್ನಲೆಯಲ್ಲಿ ರೈತರಿಗೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ. ಬಿತ್ತನೆಗೂ ಮುನ್ನ ಆಳ ಉಳುಮೆ ಹಾಗೂ ಪರ್ಯಾಯವಾಗಿ ದ್ವಿದಳ ಧಾನ್ಯ ಬೆಳೆಗಳನ್ನು ಬೆಳೆಯುವಂತೆ ಸಲಹೆ ನೀಡಲಾಗಿದೆ.

2025-26ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ 26 ರಾಗಿ ಖರೀದಿ ಕೇಂದ್ರಗಳಲ್ಲಿ ಖರೀದಿ ಪ್ರಕ್ರಿಯೆ ನಡೆಯಲಿದ್ದು, ಈಗಾಗಲೇ 46,258 ರೈತರು 10.85 ಲಕ್ಷ ಕ್ವಿಂಟಾಲ್ ರಾಗಿಗೆ ನೋಂದಣಿ ಮಾಡಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande