ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ
ವಿಜಯಪುರ, 02 ಮಾರ್ಚ್ (ಹಿ.ಸ.) ಆ್ಯಂಕರ್: ಮಾ.2ರಂದು ಜಿಲ್ಲೆಯಲ್ಲಿ ನಡೆದಿರುವ ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಾದ ಶ್ರೀ ಜಗಜ್ಯೋತಿ ಬಸವೇಶ್ವರ ಕಾಲೇಜು ಹಾಗೂ ಪಿ.ಡಿ.ಜೆ ಕಾಲೇಜುಗಳಿಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು
ಪರೀಕ್ಷೆ


ವಿಜಯಪುರ, 02 ಮಾರ್ಚ್ (ಹಿ.ಸ.)

ಆ್ಯಂಕರ್: ಮಾ.2ರಂದು ಜಿಲ್ಲೆಯಲ್ಲಿ ನಡೆದಿರುವ ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಾದ ಶ್ರೀ ಜಗಜ್ಯೋತಿ ಬಸವೇಶ್ವರ ಕಾಲೇಜು ಹಾಗೂ ಪಿ.ಡಿ.ಜೆ ಕಾಲೇಜುಗಳಿಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಅತ್ಯಂತ ಶಿಸ್ತುಬದ್ಧವಾಗಿ ನಡೆಯಬೇಕು. ಯಾವುದೇ ಲೋಪದೋಷಗಳಾಗದಂತೆ ಎಚ್ಚರಿಕೆ ವಹಿಸಬೇಕು. ವಿದ್ಯಾರ್ಥಿಗಳಿಗೆ ಅವಶ್ಯವಿರುವ ಮೂಲಭೂತ ಸೌಕರ್ಯಗಳಾದ ಒದಗಿಸಬೇಕು ಎಂದು ಅಲ್ಲಿನ ಪರೀಕ್ಷಾ ಮೇಲ್ವಿಚಾರಕರಿಗೆ ಸೂಚನೆ ನೀಡಿದರು.

ಇದೇ ವೇಳೆ ನಗರದ ಜಿಲ್ಲಾ ಪಂಚಾಯತಿ ಸಂಪನ್ಮೂಲ ಕೇಂದ್ರದಲ್ಲಿ ಸ್ಥಾಪಿಸಲಾದ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ಪರೀಕ್ಷಾ ಸಂದರ್ಭದಲ್ಲಿ ಕೇಂದ್ರಗಳಿಗೆ ಅಳವಡಿಸಿರುವ ಯಾವುದೇ ಕ್ಯಾಮೆರಾಗಳು ಸ್ಥಗಿತಗೊಳ್ಳದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಕ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸೂಚನೆ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರದ ಮುಖ್ಯಸ್ಥರಾದ ಮಹಾಂತೇಶ ಹಿಪ್ಪರಗಿ, ವೆಬ್ ಕಾಸ್ಟಿಂಗ್ ಕೇಂದ್ರದ ಸಹಾಯಕರಾದ ಮಹಾಂತೇಶ ಕನ್ನೂರ, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು, ಪೋಲಿಸ್ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande