
ತುಮಕೂರು, 02 ಮಾರ್ಚ್ (ಹಿ.ಸ.):
ಆ್ಯಂಕರ್:ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಪುರವರ ಹೋಬಳಿಯ ಕೋಡಗದಾಲ ಹಾಗೂ ಕೊಂಡವಾಡಿ ಗ್ರಾಮಗಳಲ್ಲಿ ನೂತನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಉದ್ಘಾಟನೆಯನ್ನು ಗೃಹ ಸಚಿವ ಜಿ. ಪರಮೇಶ್ವರ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಗ್ರಾಮೀಣ ಭಾಗದ ರೈತರಿಗೆ ಆರ್ಥಿಕ ನೆರವು, ಸಾಲ ಸೌಲಭ್ಯ ಮತ್ತು ಸ್ವಾವಲಂಬನೆ ಸಾಧಿಸಲು ಸಹಕಾರ ಸಂಘಗಳು ಪ್ರಮುಖ ಪಾತ್ರವಹಿಸುತ್ತವೆ. ರೈತರ ಅಭಿವೃದ್ಧಿಗೆ ಇಂತಹ ಸಂಸ್ಥೆಗಳು ಬಲವಾದ ಆಧಾರವಾಗಬೇಕು ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ, ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಜಿ.ಜೆ. ರಾಜಣ್ಣ, ಬಿ.ಎಂ.ಟಿ.ಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ, ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಹನುಮಾನ್ ಹಾಗೂ ನಾಗೇಶ್ ಬಾಬು, ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಸಂಘಗಳ ಅಧ್ಯಕ್ಷ ರಾಜ್ ಕುಮಾರ್, ಕರಿಯಣ್ಣ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa