
ಬೆಂಗಳೂರು, 02 ಮಾರ್ಚ್ (ಹಿ.ಸ.):
ಆ್ಯಂಕರ್:
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಿಂದ ಪಾದಯಾತ್ರೆ ಹೋರಾಟ ಕರ್ನಾಟಕ ರಾಜ್ಯ ರೈತ ಸಂಘವು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹನೂರು ತಾಲೂಕಿನ ಕುಡಿಯುವ ನೀರಿನ ಸಮಸ್ಯೆಕುರಿತು ಚರ್ಚಿಸಿ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಶಾಸಕ ಬಿ.ಆರ್.ಪಾಟೀಲ್, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ, ಪ್ರಧಾನ ಕಾರ್ಯದರ್ಶಿ ಎನ್.ಡಿ.ವಸಂತಕುಮಾರ್, ಮಹಿಳಾ ವಿಭಾಗದ ಕಾರ್ಯದರ್ಶಿಗಳಾದ ನೇತ್ರಾವತಿ, ರಮ್ಯ ರಾಮಣ್ಣ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa