ತಾಂತ್ರಿಕ ದೋಷ- ಅನ್ನ ಭಾಗ್ಯ ಯೋಜನೆ ಅಕ್ಕಿ ತುಂಬಿದ ಲಾರಿ ಭಸ್ಮ
ಬಾಗಲಕೋಟೆ, 20 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಎಪಿಎಂಸಿಯಿಂದ ಮುಧೋಳ ಕಡೆಗೆ ಅನ್ನಭಾಗ್ಯ ಯೋಜನೆಗಾಗಿ ಅಕ್ಕಿ ತುಂಬಿಕೊಂಡು ಹೊರಟಿದ್ದ ಲಾರಿಗೆ ಮಧ್ಯ ಮಾರ್ಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಹಾಗೂ ವಾಹನ ಸವಾರರು ನೆರವಿಗೆ ಧಾವಿಸಿದ್ದು, ಅಗ್ನಿಶಾಮಕ ದಳಕ್ಕ
ಲಾರಿ


ಬಾಗಲಕೋಟೆ, 20 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಎಪಿಎಂಸಿಯಿಂದ ಮುಧೋಳ ಕಡೆಗೆ ಅನ್ನಭಾಗ್ಯ ಯೋಜನೆಗಾಗಿ ಅಕ್ಕಿ ತುಂಬಿಕೊಂಡು ಹೊರಟಿದ್ದ ಲಾರಿಗೆ ಮಧ್ಯ ಮಾರ್ಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಹಾಗೂ ವಾಹನ ಸವಾರರು ನೆರವಿಗೆ ಧಾವಿಸಿದ್ದು, ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ಲಾರಿಯಲ್ಲಿದ್ದ ಅಕ್ಕಿ ಚೀಲಗಳಿಗೂ ಹಾನಿಯಾಗಿರುವ ಸಾಧ್ಯತೆ ಇದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande