ಬಾಗಲಕೋಟೆ ಉಪ ಚುನಾವಣೆಗೆ ಗೋವಿಂದ ಬಳ್ಳಾರಿ ನಾಮಪತ್ರ ಸಲ್ಲಿಕೆ
ಬಾಗಲಕೋಟೆ, 20 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಯ ಸಮರ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿರುವ ನಡುವೆ, ಕಾಂಗ್ರೆಸ್ನ ನಗರಸಭೆ ಮಾಜಿ ಅಧ್ಯಕ್ಷ ಹಾಗೂ ಅಭ್ಯರ್ಥಿ ಗೋವಿಂದ ಬಳ್ಳಾರಿ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು. ಗೋವಿಂದ ಬಳ್ಳಾರಿ ಅವರು ತಮ್ಮ ಬೆಂಬಲಿಗರ
ನಾಮಿನ


ಬಾಗಲಕೋಟೆ, 20 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಯ ಸಮರ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿರುವ ನಡುವೆ, ಕಾಂಗ್ರೆಸ್ನ ನಗರಸಭೆ ಮಾಜಿ ಅಧ್ಯಕ್ಷ ಹಾಗೂ ಅಭ್ಯರ್ಥಿ ಗೋವಿಂದ ಬಳ್ಳಾರಿ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಗೋವಿಂದ ಬಳ್ಳಾರಿ ಅವರು ತಮ್ಮ ಬೆಂಬಲಿಗರು ಹಾಗೂ ಮುಖಂಡರ ಸಮ್ಮುಖದಲ್ಲಿ ತಹಶೀಲ್ದಾರ ಕಚೇರಿಗೆ ಆಗಮಿಸಿ, ಬಾಗಲಕೋಟೆ ಮತಕ್ಷೇತ್ರದ ಚುನಾವಣಾಧಿಕಾರಿ ಸಂತೋಷ್ ಜಗಲಾಸರ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಉಪ ಚುನಾವಣೆಯ ಹಿನ್ನೆಲೆಯಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿದ್ದು, ಪ್ರಮುಖ ಪಕ್ಷಗಳ ಅಭ್ಯರ್ಥಿಗಳ ಜೊತೆಗೆ ಪಕ್ಷೇತರ ಅಭ್ಯರ್ಥಿಗಳೂ ಕಣಕ್ಕಿಳಿಯುತ್ತಿರುವುದು ಕ್ಷೇತ್ರದ ರಾಜಕೀಯ ಕುತೂಹಲ ಹೆಚ್ಚಿಸಿದೆ.

ಗೋವಿಂದ ಬಳ್ಳಾರಿ ಅವರ ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

ಬಾಗಲಕೋಟೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande