


ಬಾಗಲಕೋಟೆ, 20 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ ಶುಕ್ರವಾರ ವಿವಿಧ ರಾಜಕೀಯ ಪಕ್ಷಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳಿಂದ ಒಟ್ಟು 7 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿ ಸಂತೋಷ ಜಗಲಾಸರ ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಪಕ್ಷೇತರ ಅಭ್ಯರ್ಥಿ ಆನಂದ ಜಕಾತಿ ಅವರು 2 ನಾಮಪತ್ರ ಸಲ್ಲಿಸಿದ್ದಾರೆ. ಅದೇ ರೀತಿ ಬ್ಲೂ ಇಂಡಿಯಾ ಪಾರ್ಟಿಯ ಅಭ್ಯರ್ಥಿ ತಳವಾರ ಶಿವಕುಮಾರ ಅವರು ಕೂಡ 2 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಇನ್ನೂ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಅಂತೋಷ ಸವ್ವಾಸೆ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ವೀರಭದ್ರಯ್ಯ ಚರಂತಿಮಠ ಹಾಗೂ ಇಂಡಿಯನ್ ನ್ಯಾಶನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೋವಿಂದರಾಜ ಟಿ. ಬಳ್ಳಾರಿ ಅವರು ತಲಾ ಒಂದೊಂದು ನಾಮಪತ್ರ ಸಲ್ಲಿಸಿದ್ದಾರೆ.
ಈ ಮೂಲಕ ಶುಕ್ರವಾರ ಒಂದೇ ದಿನ 5 ಅಭ್ಯರ್ಥಿಗಳಿಂದ ಒಟ್ಟು 7 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಬಾಗಲಕೋಟೆ ಉಪಚುನಾವಣೆಯ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಂಡಿವೆ
---------------
ಹಿಂದೂಸ್ತಾನ್ ಸಮಾಚಾರ್ / jyothi deshpande