
ಕೊಪ್ಪಳ, 20 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಲ್ಯವಿವಾಹ ಮುಕ್ತ ರಾಜ್ಯವನ್ನಾಗಿಸುವ ಹಿನ್ನೆಲೆಯಲ್ಲಿ ಮತ್ತು ಬಾಲ್ಯವಿವಾಹಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ದೃಷ್ಠಿಯಿಂದ ವಿವಿಧ ಇಲಾಖೆಗಳನ್ನು ಹೆಚ್ಚುವರಿಯಾಗಿ ಬಾಲ್ಯವಿವಾಹ ನಿಷೇಧಾಧಿಕಾರಿಗಳನ್ನಾಗಿ ಸೇರ್ಪಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅದರಂತೆ ಹೆಚ್ಚುವರಿ ಬಾಲ್ಯವಿವಾಹ ನಿಷೇಧಾಧಿಕಾರಿಗಳನ್ನಾಗಿ ಎಲ್ಲ ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳ ಅಧೀಕ್ಷಕರು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪ ಸಂಖ್ಯಾತರ ಕಲ್ಯಾಣ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘಗಳ ವಸತಿ ಸಹಿತ/ರಹಿತ ನಿಲಯದ ಎಲ್ಲಾ ನಿಲಯ ಪಾಲಕರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಎಲ್ಲಾ ಶಾಲಾ ಶಿಕ್ಷಕರನ್ನು ಸೇರ್ಪಡೆಗೊಳಿಸಲಾಗಿದೆ.
ಆದ್ದರಿಂದ ಇನ್ನುಮುಂದೆ ಜಿಲ್ಲೆಯಲ್ಲಿ ಬಾಲ್ಯವಿವಾಹಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಮೂಲಕ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತವನ್ನಾಗಿಸುವ ಕಡೆ ಕ್ರಮ ವಹಿಸುವಂತೆ ಮತ್ತು ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ವಿಶೇಷ ಸೂಚನೆ ನೀಡಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಅಂಗಡಿ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್