
ಗದಗ, 20 ಮಾರ್ಚ್ (ಹಿ.ಸ.):
ಆ್ಯಂಕರ್:ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಗದಗ ಇವರುಗಳ ಸಹಯೋಗದಲ್ಲಿ ಆದ್ಯ ವಚನಕಾರ ನೇಕಾರ ಸಂತ ಶ್ರೀ ದೇವರ ದಾಸಿಮಯ್ಯನವರ ಜಯಂತಿಯನ್ನು ಮಾರ್ಚ್ 23 ರಂದು ಬೆಳಿಗ್ಗೆ 11 ಗಂಟೆಗೆ ಗದಗ ಬೆಟಗೇರಿಯ ಟರ್ನಲ್ ಪೇಟೆಯ ಶ್ರೀ ದೇವರ ದಾಸಿಮಯ್ಯ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಡಾ.ಶಿವರಾಜ ಎಸ್.ತಂಗಡಗಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ.
ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸರ್ಕಾರಿ ಮುಖ್ಯ ಸಚೇತಕ ಹಾಗೂ ವಿಧಾನ ಪರಿಷತ್ ಶಾಸಕ ಸಲೀಂ ಅಹ್ಮದ್ , ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್.ಪಾಟೀಲ, ಹಾವೇರಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಪಿ.ಸಿ.ಗದ್ದಿಗೌಡರ, ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಡಿ.ಆರ್.ಪಾಟೀಲ, ನರಗುಂದ ಶಾಸಕ ಸಿ.ಸಿ.ಪಾಟೀಲ, ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ವಿಧಾನ ಪರಿಷತ್ ಶಾಸಕರುಗಳಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾದಿಕಾರದ ಅಧ್ಯಕ್ಷರಾದ ಅಕ್ಬರಸಾಬ ಬಬರ್ಚಿ , ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಅಧ್ಯಕ್ಷ ಬಿ.ಬಿ.ಅಸೂಟಿ ಆಗಮಿಸುವರು.
ವಿಶೇಷ ಆಹ್ವಾನಿತರಾಗಿ ಯೋಜನೆ ಕಾರ್ಯಕ್ರಮಗಳು, ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಕಾರ್ಯದರ್ಶಿಗಳು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಶ್ರೀಮತಿ ಜಾನಕಿ ಕೆ.ಎಂ, ಆಗಮಿಸಲಿದ್ದಾರೆ.
ಆರೋಗ್ಯ ಇಲಾಖೆಯ ರಾಘವೇಂದ್ರ ಕೊಪ್ಪಳ ಉಪನ್ಯಾಸ ನೀಡುವರು.
ಜಿಲ್ಲಾಧಿಕಾರಿ ಹಾಗೂ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪೊಲೀಸ ವರಿಷ್ಟಾದಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ವ್ಹಿ.ಬಳ್ಳಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP