ಅಭಿವೃದ್ಧಿಮುಖಿ ಆಡಳಿತಕ್ಕಾಗಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠರನ್ನು ಗೆಲ್ಲಿಸೋಣ:ಶಾಹಪೂರ ಕರೆ
ವಿಜಯಪುರ, 20 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭ್ರಷ್ಟಾಚಾರ ಮತ್ತು ಅಭಿವೃದ್ಧಿ ಶೂನ್ಯತೆಯಿಂದ ಬಳಲುತ್ತಿರುವ ಕಾಂಗ್ರೆಸ್ ಆಡಳಿತಕ್ಕೆ ಅಂತ್ಯ ಹೇಳುವ ಸಮಯ ಬಂದಿದೆ ಎಂದು ಬಿಜೆಪಿ ಮುಖಂಡ ಮಾಜಿ ಶಾಸಕ ಅರುಣ ಶಹಾಪೂರ ಕರೆ ಕೊಟ್ಟಿದ್ದಾರೆ.. ಬಲಿಷ್ಠ ಹಾಗೂ ಅಭ
ಅರುಣ


ವಿಜಯಪುರ, 20 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭ್ರಷ್ಟಾಚಾರ ಮತ್ತು ಅಭಿವೃದ್ಧಿ ಶೂನ್ಯತೆಯಿಂದ ಬಳಲುತ್ತಿರುವ ಕಾಂಗ್ರೆಸ್ ಆಡಳಿತಕ್ಕೆ ಅಂತ್ಯ ಹೇಳುವ ಸಮಯ ಬಂದಿದೆ ಎಂದು ಬಿಜೆಪಿ ಮುಖಂಡ ಮಾಜಿ ಶಾಸಕ ಅರುಣ ಶಹಾಪೂರ ಕರೆ ಕೊಟ್ಟಿದ್ದಾರೆ..

ಬಲಿಷ್ಠ ಹಾಗೂ ಅಭಿವೃದ್ಧಿಮುಖಿ ಆಡಳಿತಕ್ಕಾಗಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು ಭರ್ಜರಿ ಬಹುಮತದಿಂದ ಗೆಲ್ಲಿಸಬೇಕು ಎಂದು ಅವರು ಮತದಾರರಲ್ಲಿ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

ಕ್ಷೇತ್ರದ ಸಮಗ್ರ ಅಭಿವೃದ್ಧಿ, ಮೂಲಸೌಕರ್ಯಗಳ ಬಲವರ್ಧನೆ, ಜನಪರ ಆಡಳಿತ ಮತ್ತು ಪಾರದರ್ಶಕ ವ್ಯವಸ್ಥೆಯನ್ನು ತರಲು ಬಿಜೆಪಿಗೆ ಅವಕಾಶ ನೀಡಬೇಕು ಎಂದು ಕರೆ ನೀಡಿದ್ದಾರೆ.

ಬಾಗಲಕೋಟೆಯ ಭವಿಷ್ಯವನ್ನು ರೂಪಿಸುವಲ್ಲಿ ಪ್ರತಿಯೊಬ್ಬ ಮತದಾರನ ಮತವೂ ಮಹತ್ವದ್ದಾಗಿದ್ದು, ಜನತೆ ಅಭಿವೃದ್ಧಿಯ ಪರವಾಗಿ ತೀರ್ಮಾನ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಏಪ್ರಿಲ್ 9, 2026 ರಂದು ನಡೆಯಲಿರುವ ಮತದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ಸೂಚಿಸಬೇಕು ಎಂದು ಮನವಿ ಮಾಡಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande