ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶ
ಸಿರುಗುಪ್ಪ, 20 ಮಾರ್ಚ್ (ಹಿ.ಸ.): ಆ್ಯಂಕರ್ : ಸಿರುಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ಶ್ರೀ ಕಾಡಸಿದ್ದೇಶ್ವರ ರಥೋತ್ಸವ, ಕಡುಬಿನ ಕಾಳಗ ಹಾಗೂ ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮಾ.22 ರ ಬೆಳಿಗ್ಗೆ 06 ರಿಂದ ಮಾ.23 ರ ಬೆಳಿಗ್ಗೆ 06 ಗಂಟೆಯವರೆಗೆ
ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶ


ಸಿರುಗುಪ್ಪ, 20 ಮಾರ್ಚ್ (ಹಿ.ಸ.):

ಆ್ಯಂಕರ್ : ಸಿರುಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ಶ್ರೀ ಕಾಡಸಿದ್ದೇಶ್ವರ ರಥೋತ್ಸವ, ಕಡುಬಿನ ಕಾಳಗ ಹಾಗೂ ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮಾ.22 ರ ಬೆಳಿಗ್ಗೆ 06 ರಿಂದ ಮಾ.23 ರ ಬೆಳಿಗ್ಗೆ 06 ಗಂಟೆಯವರೆಗೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21 ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳಾದ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ಮದ್ಯದ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್ಗಳನ್ನು ಮುಚ್ಚಲು ಆದೇಶಿಸಲಾಗಿದ್ದು, ಮದ್ಯ ಮಾರಾಟ ಹಾಗೂ ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಈ ಆದೇಶವು ಡಿಸ್ಟಿಲರಿಗಳಿಂದ ವಿವಿಧ ಕೆ.ಎಸ್.ಬಿ.ಸಿ.ಎಲ್ ಡಿಪೋಗಳಿಗೆ ದಾಸ್ತಾನು ರವಾನಿಸುವ ಪ್ರಕ್ರಿಯೆಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande