ಚುನಾವಣಾ ವೇಳೆ ಸಾಮಾಜಿಕ ಮಾಧ್ಯಮಗಳ ಜಾಹೀರಾತುಗಳಿಗೆ ಕಠಿಣ ನಿಯಮ
ನವದೆಹಲಿ, 20 ಮಾರ್ಚ್ (ಹಿ.ಸ.): ಆ್ಯಂಕರ್:ಮುಂದಿನ ವಿಧಾನಸಭೆ ಚುನಾವಣೆಗಳು ಮತ್ತು ಉಪಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಚುನಾವಣಾ ಆಯೋಗ ಸೋಷಿಯಲ್ ಮೀಡಿಯಾ ಹಾಗೂ ಡಿಜಿಟಲ್ ಜಾಹೀರಾತುಗಳ ಬಳಕೆಗೆ ಸಂಬಂಧಿಸಿದಂತೆ ಕಠಿಣ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. ಇನ್ಮುಂದೆ ಯಾವುದೇ ರಾಜಕೀಯ ಪಕ್
ಚುನಾವಣಾ ವೇಳೆ ಸಾಮಾಜಿಕ ಮಾಧ್ಯಮಗಳ ಜಾಹೀರಾತುಗಳಿಗೆ ಕಠಿಣ ನಿಯಮ


ನವದೆಹಲಿ, 20 ಮಾರ್ಚ್ (ಹಿ.ಸ.):

ಆ್ಯಂಕರ್:ಮುಂದಿನ ವಿಧಾನಸಭೆ ಚುನಾವಣೆಗಳು ಮತ್ತು ಉಪಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಚುನಾವಣಾ ಆಯೋಗ ಸೋಷಿಯಲ್ ಮೀಡಿಯಾ ಹಾಗೂ ಡಿಜಿಟಲ್ ಜಾಹೀರಾತುಗಳ ಬಳಕೆಗೆ ಸಂಬಂಧಿಸಿದಂತೆ ಕಠಿಣ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ.

ಇನ್ಮುಂದೆ ಯಾವುದೇ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿ ಡಿಜಿಟಲ್ ವೇದಿಕೆಗಳಲ್ಲಿ ಜಾಹೀರಾತು ನೀಡುವ ಮೊದಲು ಸರ್ಕಾರದ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣೆ ಸಮಿತಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂದು ಆಯೋಗ ಸ್ಪಷ್ಟಪಡಿಸಿದೆ.

ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗಳ ಸಂದರ್ಭದಲ್ಲಿ ಎಲ್ಲಾ ರಾಜಕೀಯ ಜಾಹೀರಾತುಗಳಿಗೆ ಪೂರ್ವ ಪ್ರಮಾಣೀಕರಣ ಪಡೆಯಬೇಕು. ಅಭ್ಯರ್ಥಿಗಳು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳ ವಿವರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

ಮಾರ್ಚ್ 15ರಂದು ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು ಆರು ರಾಜ್ಯಗಳ ಉಪಚುನಾವಣೆಗಳ ವೇಳಾಪಟ್ಟಿಯನ್ನು ಆಯೋಗ ಘೋಷಿಸಿತ್ತು. ಅಭ್ಯರ್ಥಿಗಳು ಜಿಲ್ಲೆ ಹಾಗೂ ರಾಜಕೀಯ ಪಕ್ಷಗಳು ರಾಜ್ಯ ಮಟ್ಟದ ಸಮಿತಿಗೆ ಅರ್ಜಿ ಸಲ್ಲಿಸಬಹುದು. ಸಮಿತಿಯ ತೀರ್ಮಾನದಿಂದ ಅಸಮಾಧಾನ ಇದ್ದರೆ ಮುಖ್ಯ ಚುನಾವಣಾಧಿಕಾರಿ ಅಧ್ಯಕ್ಷತೆಯ ಅಪೀಲಾತ್ಮಕ ಸಮಿತಿಗೆ ದೂರು ಸಲ್ಲಿಸುವ ಅವಕಾಶ ಇದೆ.

ಪಾರದರ್ಶಕತೆ ಹೆಚ್ಚಿಸಲು, ನಾಮಪತ್ರ ಸಲ್ಲಿಸುವ ವೇಳೆ ಅಭ್ಯರ್ಥಿಗಳು ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಗಳ ವಿವರಗಳನ್ನು ಪ್ರಮಾಣ ಪತ್ರದಲ್ಲಿ ನೀಡುವುದು ಕಡ್ಡಾಯವಾಗಿದೆ. ಪೂರ್ವಾನುಮತಿ ಇಲ್ಲದೆ ಇಂಟರ್‌ನೆಟ್‌ನಲ್ಲಿ ಯಾವುದೇ ರಾಜಕೀಯ ಜಾಹೀರಾತು ಪ್ರಕಟಿಸುವುದು ನಿಯಮ ಉಲ್ಲಂಘನೆ ಎಂದು ಪರಿಗಣಿಸಲಾಗುತ್ತದೆ.

‘ಪೇಡ್ ನ್ಯೂಸ್’ ಪ್ರಕರಣಗಳ ಮೇಲೆ ಕಠಿಣ ನಿಗಾ ವಹಿಸಲಾಗುವುದು ಎಂದು ಆಯೋಗ ಎಚ್ಚರಿಸಿದೆ. ಜೊತೆಗೆ, ಚುನಾವಣೆಯು ಮುಗಿದ 75 ದಿನಗಳ ಒಳಗೆ ರಾಜಕೀಯ ಪಕ್ಷಗಳು ತಮ್ಮ ಡಿಜಿಟಲ್ ಪ್ರಚಾರದ ಸಂಪೂರ್ಣ ವೆಚ್ಚದ ವಿವರವನ್ನು ಆಯೋಗಕ್ಕೆ ಸಲ್ಲಿಸಬೇಕು. ಇದರಲ್ಲಿ ವೆಬ್‌ಸೈಟ್ ಜಾಹೀರಾತು, ವೀಡಿಯೊ/ಗ್ರಾಫಿಕ್ಸ್ ನಿರ್ಮಾಣ ವೆಚ್ಚ ಹಾಗೂ ಸೋಷಿಯಲ್ ಮೀಡಿಯಾ ನಿರ್ವಹಣಾ ಖರ್ಚುಗಳು ಸೇರಿವೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande