
ಕೊಪ್ಪಳ, 20 ಮಾರ್ಚ್ (ಹಿ.ಸ.)
ಆ್ಯಂಕರ್ :ಜೆಸ್ಕಾಂ ಕೊಪ್ಪಳದ ಕಾರ್ಯ ಮತ್ತು ಪಾಲನಾ ವೃತ್ತ ವ್ಯಾಪ್ತಿಯ ಇ.ಎಚ್.ಟಿ/ಎಚ್.ಟಿ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸುವ ಉದ್ದೇಶದಿಂದ ಮಾರ್ಚ್ 25 ರಂದು ಬೆಳಿಗ್ಗೆ 11.30 ಗಂಟೆಗೆ ಕೊಪ್ಪಳದ ಕಾರ್ಯ ಮತ್ತು ಪಾಲನಾ ವೃತ್ತ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ.
ಸಂಬಂಧಿಸಿದ ವ್ಯಾಪ್ತಿಯ ವಿದ್ಯುತ್ ಗ್ರಾಹಕರು ಸಭೆಯಲ್ಲಿ ಪಾಲ್ಗೊಂಡು ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಜೆಸ್ಕಾಂ ಕೊಪ್ಪಳದ ಕಾರ್ಯ ಮತ್ತು ಪಾಲನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್