
ಯಲಬುರ್ಗಾ, 20 ಮಾರ್ಚ್ (ಹಿ.ಸ.)
ಆ್ಯಂಕರ್ : 2026-27ನೇ ಸಾಲಿನಲ್ಲಿ ಕುಕನೂರು ಹಾಗೂ ಯಲಬುರ್ಗಾ ತಾಲ್ಲೂಕು ಆಡಳಿತದ ವತಿಯಿಂದ ತಾಲ್ಲೂಕು ಕೇಂದ್ರಗಳಲ್ಲಿ ಏಪ್ರಿಲ್ 5 ರಂದು ಡಾ.ಬಾಬು ಜಗಜೀವನ್ ರಾಂ ಅವರ 119ನೇ ಜನ್ಮ ದಿನಾಚರಣೆ ಮತ್ತು ಏಪ್ರಿಲ್ 14 ರಂದು ಡಾ.ಬಿ.ಆರ್.ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಕುರಿತು ಚರ್ಚಿಸಲು ಮಾರ್ಚ್ 24 ಮತ್ತು 25 ರಂದು ತಾಲ್ಲೂಕು ಕೇಂದ್ರಗಳಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.
ಯಲಬುರ್ಗಾ ತಾಲ್ಲೂಕಿಗೆ ಸಂಬಂಧಿಸಿದಂತೆ ಮಾ.24 ರಂದು ಬೆಳಿಗ್ಗೆ 11 ಗಂಟೆಗೆ ಯಲಬುರ್ಗಾದ ಕಂದಾಯ ಭವನದಲ್ಲಿ ಹಾಗೂ ಕುಕನೂರ ತಾಲ್ಲೂಕಿಗೆ ಸಂಬಂಧಿಸಿದಂತೆ ಮಾ.25 ರಂದು ಬೆಳಿಗ್ಗೆ 11 ಗಂಟೆಗೆ ಕುಕನೂರಿನ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆಯನ್ನು ನಿಗದಿಪಡಿಸಲಾಗಿದೆ. ಆಯಾ ತಾಲ್ಲೂಕಿನ ತಹಶೀಲ್ದಾರರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಆಯಾ ತಾಲ್ಲೂಕುಗಳ ವ್ಯಾಪ್ತಿಯ ತಾಲ್ಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ವಿವಿಧ ಸಂಘ- ಸಂಸ್ಥೆ, ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮುಖಂಡರುಗಳು, ಮಾಧ್ಯಮ ವರದಿಗಾರರು ಪೂರ್ವಭಾವಿ ಸಭೆಗಳಿಗೆ ಹಾಜರಾಗಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಬೇಕೆಂದು ಯಲಬುರ್ಗಾ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು(ಗ್ರೇಡ್-2) ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್