
ವಿಜಯಪುರ, 20 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರದಲ್ಲಿನ ತಮ್ಮ ನಿವಾಸದಲ್ಲಿ ಇಂದು ಮತಕ್ಷೇತ್ರದ ಸಾರ್ವಜನಿಕರನ್ನು ಭೇಟಿ ಮಾಡಿದ ಸಚಿವ ಶಿವಾನಂದ ಪಾಟೀಲ ಅವರು ಜನರ ಅಹವಾಲುಗಳನ್ನು ಆಲಿಸಿ, ವಿವಿಧ ಸಮಸ್ಯೆಗಳ ಕುರಿತು ಮನವಿಗಳನ್ನು ಸ್ವೀಕರಿಸಿದರು.
ಈ ವೇಳೆ ಸಾರ್ವಜನಿಕರು ತಮ್ಮ ದೈನಂದಿನ ಜೀವನಕ್ಕೆ ಸಂಬಂಧಿಸಿದ ಸಮಸ್ಯೆಗಳು, ಮೂಲಸೌಕರ್ಯಗಳ ಕೊರತೆ, ವಿವಿಧ ಅಭಿವೃದ್ಧಿ ಕಾಮಗಾರಿಗಳ ವಿಳಂಬ ಸೇರಿದಂತೆ ಹಲವಾರು ವಿಷಯಗಳನ್ನು ಸಚಿವರ ಗಮನಕ್ಕೆ ತಂದರು.
ಜನರಿಂದ ಬಂದ ದೂರುಗಳು ಮತ್ತು ಮನವಿಗಳನ್ನು ಗಮನದಿಂದ ಆಲಿಸಿದ ಸಚಿವ ಶಿವಾನಂದ ಪಾಟೀಲ್, ಅವುಗಳನ್ನು ಆದಷ್ಟು ಬೇಗ ಪರಿಹರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿರುವುದಾಗಿ ತಿಳಿಸಿದರು.
ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ತಮ್ಮ ಕರ್ತವ್ಯವಾಗಿದ್ದು, ಸಾರ್ವಜನಿಕರ ಧ್ವನಿಗೆ ಶಕ್ತಿ ನೀಡುವುದರ ಜೊತೆಗೆ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಅವರು ಹೇಳಿದರು.
ಜನರೊಂದಿಗೆ ನೇರ ಸಂಪರ್ಕ ಸಾಧಿಸಿ, ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ಇಂತಹ ಜನಸ್ಪಂದನಾ ಕಾರ್ಯಕ್ರಮಗಳನ್ನು ನಿರಂತರವಾಗಿ ಮುಂದುವರಿಸಲಾಗುವುದು ಎಂದು ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande