ದಾವಣಗೆರೆ ದಕ್ಷಿಣ ಉಪಚುನಾವಣೆ: ಸಮರ್ಥ ಶಾಮನೂರು ನಾಮಪತ್ರ ಸಲ್ಲಿಕೆ
ದಾವಣಗೆರೆ, 20 ಮಾರ್ಚ್ (ಹಿ.ಸ.): ಆ್ಯಂಕರ್: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲ ಉಂಟಾಗಿದೆ. ಶಾಮನೂರು ಕುಟುಂಬದ ರಾಜಕೀಯ ನಡೆಯಿಂದ ಪಕ್ಷದೊಳಗಿನ ಸಮೀಕರಣಗಳು ಅಸ್ಥಿರಗೊಂಡಿವೆ. ಶಾಮನೂರು ಶಿವಶಂಕರಪ್ಪ ನಿಧನದಿಂದ ತೆ
Nomination


ದಾವಣಗೆರೆ, 20 ಮಾರ್ಚ್ (ಹಿ.ಸ.):

ಆ್ಯಂಕರ್:

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲ ಉಂಟಾಗಿದೆ. ಶಾಮನೂರು ಕುಟುಂಬದ ರಾಜಕೀಯ ನಡೆಯಿಂದ ಪಕ್ಷದೊಳಗಿನ ಸಮೀಕರಣಗಳು ಅಸ್ಥಿರಗೊಂಡಿವೆ.

ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿರುವ ಕ್ಷೇತ್ರದಲ್ಲಿ ಅವರ ಮೊಮ್ಮಗ ಹಾಗೂ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಶಾಮನೂರು ಟಿಕೆಟ್ ಘೋಷಣೆಗೆ ಮುನ್ನವೇ ನಾಮಪತ್ರ ಸಲ್ಲಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಮಾಹಿತಿ ಪ್ರಕಾರ, ಸಮರ್ಥ್ ಶಾಮನೂರು ಅವರು ಇಂದು ಎರಡು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಒಂದನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ, ಮತ್ತೊಂದನ್ನು ಸ್ವತಂತ್ರ ಅಭ್ಯರ್ಥಿಯಾಗಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಪಕ್ಷದ ಅಧಿಕೃತ ಅಭ್ಯರ್ಥಿ ಘೋಷಣೆಗೆ ಮುನ್ನವೇ ನಾಮಪತ್ರ ಸಲ್ಲಿಸಿರುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಅಚ್ಚರಿಯಾಗಿದೆ.

ಇದರ ನಡುವೆ ಕ್ಷೇತ್ರದ ಅಲ್ಪಸಂಖ್ಯಾತ ಸಮುದಾಯದವರು ತಮ್ಮ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಒತ್ತಾಯಿಸುತ್ತಿದ್ದು, ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಮತ್ತಷ್ಟು ಸಂಕೀರ್ಣಗೊಂಡಿದೆ.

ಒಟ್ಟಾರೆ, ಶಾಮನೂರು ಕುಟುಂಬದ ಈ ನಡೆ ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಒಳರಾಜಕೀಯಕ್ಕೆ ಹೊಸ ತಿರುವು ನೀಡಿದ್ದು, ಮುಂದಿನ ಬೆಳವಣಿಗೆಗಳತ್ತ ರಾಜಕೀಯ ವಲಯದ ಕಣ್ಣು ನೆಟ್ಟಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande