
ಹಳಿಯಾಳ, 21 ಮಾರ್ಚ್ (ಹಿ.ಸ.):
ಆ್ಯಂಕರ್:
ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಹಳಿಯಾಳ ಪಟ್ಟಣದ ಮರಡಿಗುಡ್ಡದ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಆರ್.ವಿ. ದೇಶಪಾಂಡೆ ಭಾಗವಹಿಸಿ, ಮುಸ್ಲಿಂ ಬಾಂಧವರಿಗೆ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತ ದೇಶವು ವೈವಿಧ್ಯಮಯ ಜಾತಿ, ಧರ್ಮ, ಭಾಷೆ ಮತ್ತು ಸಂಸ್ಕೃತಿಗಳ ಸಮನ್ವಯವಾಗಿದ್ದು, ‘ವೈವಿಧ್ಯದಲ್ಲಿ ಏಕತೆ’ ಎಂಬ ಮಹತ್ತರ ಆದರ್ಶವನ್ನು ವಿಶ್ವಕ್ಕೆ ತೋರಿಸಿದೆ ಎಂದು ಹೇಳಿದರು.
ಸೌಹಾರ್ದತೆ ಮತ್ತು ಪರಸ್ಪರ ಗೌರವದ ಮನೋಭಾವವನ್ನು ಎಲ್ಲರೂ ಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಮತ್ತು ಒಗ್ಗಟ್ಟು ಬಲವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಪವಿತ್ರ ರಂಜಾನ್ ಹಬ್ಬವು ಎಲ್ಲರ ಜೀವನದಲ್ಲಿ ಶಾಂತಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ ಎಂದು ಅವರು ಹಾರೈಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa