


ಬಳ್ಳಾರಿ, 21 ಮಾರ್ಚ್ (ಹಿ.ಸ.)
ಆ್ಯಂಕರ್ : ಬಳ್ಳಾರಿ ಜಿಲ್ಲೆಯಾದ್ಯಂತ ಪವಿತ್ರ ರಂಜಾನ್ ಹಬ್ಬವನ್ನು ಶಾಂತಿ ಮತ್ತು ಸಂಭ್ರಮದಿಂದ ಶನಿವಾರ ಆಚರಿಸಲಾಗಿದೆ.
ಬಳ್ಳಾರಿಯ ಈದ್ಗಾ ಮೈದಾನದಲ್ಲಿ ಸಭೆ ಸೇರಿದ್ದ ಮುಸ್ಲಿಂ ಭಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಶ್ರದ್ಧೆ - ಭಕ್ತಿ ಮತ್ತು ಸಮರ್ಪಣಾ ಮನೋಭಾವದಿಂದ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಆಲಿಂಗನ ಮಾಡಿಕೊಂಡು, ಶುಭ ಕೋರಿದರು.
ಬಳ್ಳಾರಿ ನಗರ ಶಾಸಕ ನಾರಾ ಭರತರೆಡ್ಡಿ, ಬಳ್ಳಾರಿ ಲೋಕಸಭಾ ಸದಸ್ಯ ಈ. ತುಕಾರಾಂ, ಮೇಯರ್ ಪಿ. ಗಾದೆಪ್ಪ,
ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ಲಂ ಪ್ರಶಾಂತ್, ಬುಡ ಮಾಜಿ ಅಧ್ಯಕ್ಷ ಹುಮಾಯೂನ್ ಖಾನ್ ಹಾಗೂ ಜನಪ್ರತಿನಿಧಿಗಳು - ವಿವಿಧ ಪಕ್ಷಗಳ ಮುಖಂಡರು, ಸಂಘಟನೆಗಳವರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್