
ವಿಜಯಪುರ, 21 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ಶಾಸಕ ಯಶವಂತರಾಯಗೌಡ ಪಾಟೀಲ ಅವರು ಸಾರ್ವಜನಿಕರನ್ನು ಖುದ್ದಾಗಿ ಭೇಟಿ ಮಾಡಿ ಅವರ ಕುಂದು-ಕೊರತೆಗಳನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಿದರು.
ವಿವಿಧ ಗ್ರಾಮಗಳಿಂದ ಆಗಮಿಸಿದ ನಾಗರಿಕರು ತಮ್ಮ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಮಂಡಿಸಿದರು.
ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸ್ಥಳದಲ್ಲೇ ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ಜನರ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.
ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ಪರಿಹಾರ ಕಂಡುಹಿಡಿಯುವುದು ಜನಪ್ರತಿನಿಧಿಗಳ ಜವಾಬ್ದಾರಿಯಾಗಿದೆ ಎಂದು ತಿಳಿಸಿದ ಅವರು, ಮುಂದೆಯೂ ಇಂತಹ ಜನಸಂಪರ್ಕ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರೊಂದಿಗೆ ನಿರಂತರ ಸಂಪರ್ಕದಲ್ಲಿರಲಾಗುವುದು ಎಂದು ಹೇಳಿದರು
---------------
ಹಿಂದೂಸ್ತಾನ್ ಸಮಾಚಾರ್ / jyothi deshpande