
ನವದೆಹಲಿ, 21 ಮಾರ್ಚ್ (ಹಿ.ಸ.):
ಆ್ಯಂಕರ್:
ಈದ್-ಉಲ್-ಫಿತರ್ ಹಬ್ಬದ ಅಂಗವಾಗಿ ದೇಶದ ಗಣ್ಯ ನಾಯಕರು ನಾಗರಿಕರಿಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿ, ಸಮಾಜದಲ್ಲಿ ಸಹೋದರತ್ವ, ಸಾಮರಸ್ಯ ಮತ್ತು ಸಮೃದ್ಧಿ ಹೆಚ್ಚಳವಾಗಲಿ ಎಂದು ಹಾರೈಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಸಂದೇಶ ಹಂಚಿಕೊಂಡು, “ಈದ್ ಅಲ್-ಫಿತರ್ ಹಬ್ಬದ ಶುಭ ಸಂದರ್ಭದಲ್ಲಿ ಎಲ್ಲಾ ಸಹ ನಾಗರಿಕರಿಗೆ, ವಿಶೇಷವಾಗಿ ಮುಸ್ಲಿಂ ಸಮುದಾಯದವರಿಗೆ ಹೃತ್ಪೂರ್ವಕ ಶುಭಾಶಯಗಳು. ಈ ಹಬ್ಬವು ಸ್ವಯಂ ಸಂಯಮ, ಸೇವಾ ಮನೋಭಾವ, ಲೋಕೋಪಕಾರ ಹಾಗೂ ದೀನದಲಿತರ ಬಗ್ಗೆ ಸಹಾನುಭೂತಿಯನ್ನು ಬೆಳೆಸುತ್ತದೆ. ಸಮಾಜ ಮತ್ತು ರಾಷ್ಟ್ರವನ್ನು ಸಬಲಗೊಳಿಸಲು ಈ ಅವಕಾಶವನ್ನು ಬಳಸಿಕೊಳ್ಳಬೇಕು” ಎಂದು ಕರೆ ನೀಡಿದರು.
ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು “ಈದ್ ಮುಬಾರಕ್! ಈ ಪವಿತ್ರ ಹಬ್ಬವು ಭರವಸೆ, ಸಾಮರಸ್ಯ ಮತ್ತು ಸಹಾನುಭೂತಿಯನ್ನು ಹೆಚ್ಚಿಸಲಿ ಹಾಗೂ ಎಲ್ಲರ ಜೀವನದಲ್ಲಿ ಸಂತೋಷ ಮತ್ತು ಯಶಸ್ಸು ತರಲಿ” ಎಂದು ತಮ್ಮ ಸಂದೇಶದಲ್ಲಿ ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಹ ತಮ್ಮ ಎಕ್ಸ ಸಂದೇಶದ ಮೂಲಕ ದೇಶವಾಸಿಗಳಿಗೆ ಶುಭಾಶಯ ಕೋರಿದ್ದು, ಈ ಹಬ್ಬವು ಸಮಾಜದಲ್ಲಿ ಸಹೋದರತ್ವ ಮತ್ತು ಪರಸ್ಪರ ಸಹಾನುಭೂತಿಯ ಮನೋಭಾವವನ್ನು ಇನ್ನಷ್ಟು ಬಲಪಡಿಸಲಿ ಎಂದು ಆಶಿಸಿದರು. ಎಲ್ಲರಿಗೂ ಸಂತೋಷ, ಶಾಂತಿ ಮತ್ತು ಉತ್ತಮ ಆರೋಗ್ಯ ಲಭಿಸಲಿ ಎಂದು ಹಾರೈಸಿದ್ದಾರೆ
ದೇಶಾದ್ಯಂತ ಈದ್-ಉಲ್-ಫಿತರ್ ಹಬ್ಬವನ್ನು ಉತ್ಸಾಹಭರಿತವಾಗಿ ಆಚರಿಸಲಾಗುತ್ತಿದೆ. ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗಳು ನಡೆಯುತ್ತಿದ್ದು, ಜನರು ಪರಸ್ಪರ ಅಪ್ಪಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡು ಹಬ್ಬದ ಸಂಭ್ರಮದಲ್ಲಿ ತೊಡಗಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa