ಸೋಮವಾರ ಕಾಂಗ್ರೆಸ್ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ: ಸಚಿವ ಆರ್.ಬಿ. ತಿಮ್ಮಾಪುರ
ಬಾಗಲಕೋಟೆ, 21 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಸೋಮವಾರ (ಮಾರ್ಚ್ 23) ರಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋ
ತಿಮ್ಮಪ್ಪ


ಬಾಗಲಕೋಟೆ, 21 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಸೋಮವಾರ (ಮಾರ್ಚ್ 23) ರಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದ್ದಾರೆ.

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಮಧ್ಯಾಹ್ನ 12ರಿಂದ 2 ಗಂಟೆಯೊಳಗೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದರು.

ಈ ಉಪಚುನಾವಣೆ ಕಾಂಗ್ರೆಸ್ ಪಕ್ಷದ ಗೆಲುವಿಗೆ ಅನುಕೂಲಕರವಾಗಿದ್ದು, ದಿವಂಗತ ಎಚ್.ವೈ. ಮೇಟಿ ಅವರು ಕ್ಷೇತ್ರದಲ್ಲಿ ಮಾಡಿದ ಜನೋಪಯೋಗಿ ಅಭಿವೃದ್ಧಿ ಕಾರ್ಯಗಳು ಪಕ್ಷದ ಗೆಲುವಿಗೆ ಬಲ ನೀಡಲಿವೆ ಎಂದು ಹೇಳಿದರು.

ಮೇಟಿ ಅವರು ಬಾಗಲಕೋಟೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ತಂದುಕೊಟ್ಟಿದ್ದು, ಬಿಟಿಡಿಎಗೆ ಅನುದಾನ ತಂದು ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಅವರ ಸಾಧನೆ ಹಾಗೂ ಜನಪರ ಕೆಲಸಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಜನರ ಬೆಂಬಲ ದೊರೆಯಲಿದೆ ಎಂದು ತಿಮ್ಮಾಪುರ ಹೇಳಿದರು.

ಬಾಗಲಕೋಟೆ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದು, ಇಂದು ಅಥವಾ ನಾಳೆಯೊಳಗೆ ಅಭ್ಯರ್ಥಿಯ ಹೆಸರು ಅಂತಿಮವಾಗುವ ಸಾಧ್ಯತೆ ಇದೆ. ಈ ಬಗ್ಗೆ ಪಕ್ಷದ ನಾಯಕರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಟಿ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದು, ವರಿಷ್ಠರು ಸೂಚಿಸುವ ಅಭ್ಯರ್ಥಿಗೆ ಎಲ್ಲರೂ ಬೆಂಬಲ ನೀಡಲಿದ್ದಾರೆ. ದಿವಂಗತ ಎಚ್.ವೈ. ಮೇಟಿ ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡುವ ಸಾಧ್ಯತೆ ಇರುವುದಾಗಿ ಸಚಿವ ತಿಮ್ಮಾಪುರ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande