ಮಾಲಿಂಗಪುರದಲ್ಲಿ ಗೋವಿಂದ ಕಾರಜೋಳರಿಗೆ ಸನ್ಮಾನ
ಬಾಗಲಕೋಟೆ, 21 ಮಾರ್ಚ್ (ಹಿ.ಸ.) ಆ್ಯಂಕರ್ : ಮಾಲಿಂಗಪುರದ ಶ್ರೀಶೈಲ ಮಲ್ಲಿಕಾರ್ಜುನ ಅನ್ನದಾಸೋಹ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಇಂದು ಸಂಸದ ಗೋವಿಂದ ಕಾರಜೋಳ ಅವರನ್ನು ಭೇಟಿಯಾಗಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು. ಬಾಗಲಕೋಟೆ ಜಿಲ್ಲೆಯ ರಬಕವಿ - ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ
ಅನ್ನ


ಬಾಗಲಕೋಟೆ, 21 ಮಾರ್ಚ್ (ಹಿ.ಸ.)

ಆ್ಯಂಕರ್ : ಮಾಲಿಂಗಪುರದ ಶ್ರೀಶೈಲ ಮಲ್ಲಿಕಾರ್ಜುನ ಅನ್ನದಾಸೋಹ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಇಂದು ಸಂಸದ ಗೋವಿಂದ ಕಾರಜೋಳ ಅವರನ್ನು ಭೇಟಿಯಾಗಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.

ಬಾಗಲಕೋಟೆ ಜಿಲ್ಲೆಯ ರಬಕವಿ - ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ನಡೆದ ದಾಸೋಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅನ್ನದಾಸೋಹದಂತಹ ಪವಿತ್ರ ಸೇವಾ ಕಾರ್ಯದಲ್ಲಿ ತೊಡಗಿರುವ ಸಮಿತಿಯ ಪ್ರೀತಿ ಮತ್ತು ಅಭಿಮಾನಕ್ಕೆ ಸದಾ ಋಣಿ ಎಂದು ಹೇಳಿದರು. ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ಮಾಡುತ್ತಿರುವ ಇಂತಹ ಸಂಸ್ಥೆಗಳ ಆಶೀರ್ವಾದ ಹಾಗೂ ಜನರ ಬೆಂಬಲವೇ ತಮ್ಮ ಸಾರ್ವಜನಿಕ ಸೇವಾ ಕಾರ್ಯಗಳಿಗೆ ದೊಡ್ಡ ಶಕ್ತಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಸಮಿತಿಯ ಹಿರಿಯರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಕಾರಜೋಳ ಅವರಿಗೆ ಶುಭಾಶಯಗಳನ್ನು ತಿಳಿಸಿದರು. ಮಲ್ಲಿಕಾರ್ಜುನ ಸ್ವಾಮಿಯ ಕೃಪೆ ಎಲ್ಲರ ಮೇಲಿರಲಿ ಎಂದು ಅವರು ಹಾರೈಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande