
ಹಾಸನ, 21 ಮಾರ್ಚ್ (ಹಿ.ಸ.):
ಆ್ಯಂಕರ್:
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಅರಕಲಗೂಡು ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿ, ಸಮಸ್ತ ಮುಸ್ಲಿಂ ಬಾಂಧವರಿಗೆ ಹೃದಯಪೂರ್ವಕ ರಂಜಾನ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶಾಂತಿ, ಸೌಹಾರ್ದತೆ ಮತ್ತು ಸಹೋದರತ್ವದ ಸಂದೇಶವನ್ನು ಸಾರುವ ಪವಿತ್ರ ರಂಜಾನ್ ಹಬ್ಬವು ಸಮಾಜದಲ್ಲಿ ಏಕತೆ ಹಾಗೂ ಸಹಬಾಳ್ವೆಯನ್ನು ಬಲಪಡಿಸುವುದಾಗಿ ತಿಳಿಸಿದರು.
ಹಬ್ಬದ ಆತ್ಮಸ್ಫೂರ್ತಿಯಂತೆ ಎಲ್ಲರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಶಾಂತಿ ನೆಲೆಸಲಿ ಎಂದು ಹಾರೈಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa