
ಬೀದರ್, 21 ಮಾರ್ಚ್ (ಹಿ.ಸ.):
ಆ್ಯಂಕರ್:
ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಇಂದು ಭಾಲ್ಕಿಯ ಈದ್ಗಾ ಮೈದಾನದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಮುಸ್ಲಿಂ ಬಾಂಧವರನ್ನು ಭೇಟಿ ಮಾಡಿ ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಂಜಾನ್ ಹಬ್ಬವು ಹಿಂದೂ–ಮುಸ್ಲಿಂ ಭಾವೈಕ್ಯತೆಯ ಸಂದೇಶವನ್ನು ಸಾರುವುದಾಗಿ ಹೇಳಿದರು. ತ್ಯಾಗ, ಸಹಾನುಭೂತಿ ಹಾಗೂ ಮಾನವೀಯತೆಯ ಮೌಲ್ಯಗಳನ್ನು ಒತ್ತಿ ಹೇಳುವ ಈ ಪವಿತ್ರ ಹಬ್ಬವು ಸಮಾಜದಲ್ಲಿ ಸೌಹಾರ್ದತೆ, ಏಕತೆ ಮತ್ತು ಸಹೋದರತ್ವವನ್ನು ಮತ್ತಷ್ಟು ಬಲಪಡಿಸುವುದಾಗಿ ತಿಳಿಸಿದರು.
ಹಬ್ಬದ ಶುಭ ಸಂದರ್ಭದಲ್ಲಿ ಎಲ್ಲರ ಜೀವನದಲ್ಲಿ ಸುಖ, ಶಾಂತಿ ಹಾಗೂ ಸಮೃದ್ಧಿ ನೆಲೆಸಲಿ ಎಂದು ಸಚಿವರು ಹಾರೈಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa