
ವಿಜಯಪುರ, 22 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಪಕ್ಷವು ಮತದಾರರು ಹಾಗೂ ಕಾರ್ಯಕರ್ತರಿಗೆ ಮಾಹಿತಿ ತಲುಪಿಸುವ ಉದ್ದೇಶದಿಂದ ವಿಶೇಷ ವಾಟ್ಸ್ಆಪ್ ಸಂಖ್ಯೆಯನ್ನು ಬಿಡುಗಡೆ ಮಾಡಿದೆ.
ಬಾಗಲಕೋಟೆ ಕ್ಷೇತ್ರದ ಸಾರ್ವಜನಿಕರು ಹಾಗೂ ಬಿಜೆಪಿ ಕಾರ್ಯಕರ್ತರು ತಮ್ಮ ಯಾವುದೇ ವಾಟ್ಸ್ಆಪ್ ಗ್ರೂಪ್ಗಳಿಗೆ 📱 98869 54448 ಸಂಖ್ಯೆಯನ್ನು ಸೇರಿಸುವ ಮೂಲಕ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಹಾಗೂ ಚುನಾವಣೆಗೆ ಸಂಬಂಧಿಸಿದ ವಿವಿಧ ಮಾಹಿತಿ, ಕಾರ್ಯಕ್ರಮಗಳ ವಿವರಗಳು ಮತ್ತು ಪಕ್ಷದ ಚಟುವಟಿಕೆಗಳ ಅಪ್ಡೇಟ್ಗಳನ್ನು ಪಡೆಯಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ವಿಕಸಿತ ಬಾಗಲಕೋಟೆ ನಿರ್ಮಾಣದ ಗುರಿಯೊಂದಿಗೆ ಬಿಜೆಪಿ ಪಕ್ಷವನ್ನು ಬೆಂಬಲಿಸುವಂತೆ ಪಕ್ಷದ ನಾಯಕರು ಕರೆ ನೀಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande