
ಬೆಂಗಳೂರು, 22 ಮಾರ್ಚ್ (ಹಿ.ಸ.):
ಆ್ಯಂಕರ್:
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಮಲ್ಲಿಕಾರ್ಜುನಗೆ ಟಿಕೆಟ್ ಘೋಷಣೆಯಾಗಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸದಾಶಿವನಗರದ ತಮ್ಮ ನಿವಾಸದಲ್ಲಿ ಸಮರ್ಥ ತಂದೆ ಎಸ್.ಎಸ್ ಮಲ್ಲಿಕಾರ್ಜುನ ಅವರಗೆ ಬಿ.ಫಾರಂ ಹಸ್ತಾಂತರಿಸಿ ಶುಭಹಾರೈಸಿದರು.
ನಾಳೆ ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ನಡೆಯಲಿರುವ ನಾಮಪತ್ರ ಸಲ್ಲಿಕೆಯ ಕಾರ್ಯಕ್ರಮದಲ್ಲಿ ನಾವೆಲ್ಲರೂ ಭಾಗವಹಿಸುತ್ತಿದ್ದೇವೆ. ಒಮ್ಮತದಿಂದ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದೇ ನಮ್ಮ ಗುರಿಯಾಗಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa