
ಬಾಗಲಕೋಟೆ, 22 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಬದಾಮಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕ ಮುಚ್ಚಳಗುಡ್ಡ RMSA ಶಾಲೆಯ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರದಲ್ಲಿ ಇಂದು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಪಾಲಕರ ನಡುವೆ ಗಲಾಟೆ ಉಂಟಾದ ಬಗ್ಗೆ 112 ತುರ್ತು ಸಹಾಯವಾಣಿಗೆ ಕರೆ ಬಂದಿತು.
ಕೂಡಲೇ ಕರೆಗೆ ಸ್ಪಂದಿಸಿದ 112 ತುರ್ತು ಸಹಾಯ ವಾಹನದ ಅಧಿಕಾರಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.
ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳ ಪಾಲಕರಿಗೆ ಪರೀಕ್ಷಾ ಕೇಂದ್ರದ ನಿಯಮಗಳನ್ನು ಕುರಿತು ತಿಳುವಳಿಕೆ ನೀಡಿದರು.
ಪರೀಕ್ಷೆ ಸುಗಮವಾಗಿ ನಡೆಯಲು ಅಗತ್ಯ ಕ್ರಮ ಕೈಗೊಂಡ ಪೊಲೀಸರು, ಎಲ್ಲರನ್ನು ಪರೀಕ್ಷಾ ಕೇಂದ್ರದ ಆವರಣದಿಂದ ಹೊರಗೆ ಕಳುಹಿಸಿದರು.
ಇದರ ಪರಿಣಾಮವಾಗಿ ಎಸ್ಎಸ್ಎಲ್ಸಿ ಪರೀಕ್ಷೆ ಯಾವುದೇ ಅಡಚಣೆ ಇಲ್ಲದೆ ಶಾಂತಿಯುತವಾಗಿ ನಡೆಯಲು ಅನುಕೂಲವಾಯಿತು.
ಈ ಸಂದರ್ಭ ಪೊಲೀಸ್ ಇಲಾಖೆಯ ತ್ವರಿತ ಕಾರ್ಯಾಚರಣೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande