ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಹೆಣ್ಣು ಮಗು ಜನಿಸಿದರೆ ಉಚಿತ ಚಿಕಿತ್ಸೆ: ಸ್ಪಂದನಾ ಆಸ್ಪತ್ರೆಯ ವಿಶೇಷ ಕೊಡುಗೆ
ವಿಜಯಪುರ, 22 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಇಂಡಿ ನಗರದಲ್ಲಿರುವ ಸ್ಪಂದನಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ವಿಶಿಷ್ಟ ಸಾಮಾಜಿಕ ಕೊಡುಗೆಯನ್ನು ಶಾಸಕ ಯಶವಂತರಾಯಗೌಡ ಪಾಟೀಲ್ ಲೋಕಾರ್ಪಣೆ ಮಾಡಿದರು. ಈ ಯೋಜನೆಯಡಿ ಆಸ್ಪತ್ರೆಯಲ್ಲಿ ಯಾ
Yash


ವಿಜಯಪುರ, 22 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಇಂಡಿ ನಗರದಲ್ಲಿರುವ ಸ್ಪಂದನಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ವಿಶಿಷ್ಟ ಸಾಮಾಜಿಕ ಕೊಡುಗೆಯನ್ನು ಶಾಸಕ ಯಶವಂತರಾಯಗೌಡ ಪಾಟೀಲ್ ಲೋಕಾರ್ಪಣೆ ಮಾಡಿದರು.

ಈ ಯೋಜನೆಯಡಿ ಆಸ್ಪತ್ರೆಯಲ್ಲಿ ಯಾರಿಗಾದರೂ ಸಹಜ ಹೆರಿಗೆ ಅಥವಾ ಸಿಜೇರಿಯನ್ ಹೆರಿಗೆಯ ಮೂಲಕ ಹೆಣ್ಣು ಮಗು ಜನಿಸಿದರೆ ಆ ಚಿಕಿತ್ಸೆಯನ್ನು ಸಂಪೂರ್ಣ ಉಚಿತವಾಗಿ ನೀಡಲಾಗುತ್ತದೆ. ಹೆಣ್ಣು ಮಕ್ಕಳಿಗೆ ಸಮಾಜದಲ್ಲಿ ಹೆಚ್ಚಿನ ಮೌಲ್ಯ ದೊರೆಯುವಂತೆ ಹಾಗೂ ಅವರಿಗೆ ಗೌರವದ ಸ್ಥಾನ ಕಲ್ಪಿಸುವ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಈ ಪುಣ್ಯಕಾರ್ಯವನ್ನು ಉದ್ಘಾಟಿಸುವ ಅವಕಾಶ ದೊರೆತಿದ್ದು, ಈ ಸಾಮಾಜಿಕ ಕಾಳಜಿಯ ಕಾರ್ಯವನ್ನು ಕೈಗೊಂಡಿರುವ ಆಸ್ಪತ್ರೆಯ ಮಾಲೀಕರು, ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಅಭಿನಂದಿಸಲಾಯಿತು.

ಸಮಾಜದಲ್ಲಿ ಹೆಣ್ಣು ಮಕ್ಕಳ ಮಹತ್ವವನ್ನು ಹೆಚ್ಚಿಸಲು ಇಂತಹ ಕಾರ್ಯಕ್ರಮಗಳು ಪ್ರೇರಣೆಯಾಗಲಿ ಎಂದು ಆಶಿಸಲಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande