ಪದವೀಧರ ಕ್ಷೇತ್ರದ ಚುನಾವಣೆ:ಹಾವೇರಿಯಲ್ಲಿ ಕಾಂಗ್ರೆಸ್ ಸಭೆ
ಹಾವೇರಿ, 22 ಮಾರ್ಚ್ (ಹಿ.ಸ.): ಆ್ಯಂಕರ್:ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಎಲ್ಲಾ ಬ್ಲಾಕ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆ ಸಂಜೀವಣ್ಣ ನೀರಲಗಿ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ಜರುಗಿತು. ಸಭೆಯಲ್ಲಿ ಶಾಸಕರು ಹಾಗೂ ವಿಧಾನಸಭೆಯ ಉಪಸಭಾಧ
Meeting


ಹಾವೇರಿ, 22 ಮಾರ್ಚ್ (ಹಿ.ಸ.):

ಆ್ಯಂಕರ್:ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಎಲ್ಲಾ ಬ್ಲಾಕ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆ ಸಂಜೀವಣ್ಣ ನೀರಲಗಿ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ಜರುಗಿತು.

ಸಭೆಯಲ್ಲಿ ಶಾಸಕರು ಹಾಗೂ ವಿಧಾನಸಭೆಯ ಉಪಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಆನಂದ ಗಡ್ಡದೇವರಮಠ, ಎಸ್.ವಿ. ಪಾಟೀಲ್, ಮಹಿಳಾ ಘಟಕದ ಅಧ್ಯಕ್ಷರಾದ ಪ್ರೇಮಾ ಪಾಟೀಲ್, ಶ್ರೀ ಖಾಜಿ, ಎಂ.ಎಂ. ಮೈದುರ್, ಶಂಕರ ಮೆಹರವಾಡೆ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಸಭೆಯಲ್ಲಿ ಮುಂಬರುವ ಪಶ್ಚಿಮ ಪದವೀಧರರ ಚುನಾವಣೆಯ ಕುರಿತು ಸುಧೀರ್ಘ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಪದಾಧಿಕಾರಿಗಳಿಗೆ ವಿವಿಧ ಚುನಾವಣಾ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದ್ದು, ಎಲ್ಲರೂ ಸಕ್ರಿಯವಾಗಿ ಭಾಗವಹಿಸುವಂತೆ ಅಭ್ಯರ್ಥಿ ಮೋಹನ ಲಿಂಬಿಕಾಯಿ ಕರೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande