ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ:ಬಿಜೆಪಿ ಉಸ್ತುವಾರಿಗಳ ನೇಮಕ
ಬೆಂಗಳೂರು, 22 ಮಾರ್ಚ್ (ಹಿ.ಸ.): ಆ್ಯಂಕರ್: ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಐದು ಪ್ರಾಧಿಕಾರಗಳಿಗೆ ರಾಜ್ಯ ಮಟ್ಟದ ತಂಡ, ಪ್ರತಿ ಪ್ರಾಧಿಕಾರಗಳಿಗೆ ಪ್ರತ್ಯೇಕ ತಂಡ ಹಾಗೂ ಪ್ರಾಧಿಕಾರ ವ್ಯಾಪ್ತಿಗೆ ಒಳಪಡುವ ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗ
Bjp


ಬೆಂಗಳೂರು, 22 ಮಾರ್ಚ್ (ಹಿ.ಸ.):

ಆ್ಯಂಕರ್:

ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಐದು ಪ್ರಾಧಿಕಾರಗಳಿಗೆ ರಾಜ್ಯ ಮಟ್ಟದ ತಂಡ, ಪ್ರತಿ ಪ್ರಾಧಿಕಾರಗಳಿಗೆ ಪ್ರತ್ಯೇಕ ತಂಡ ಹಾಗೂ ಪ್ರಾಧಿಕಾರ ವ್ಯಾಪ್ತಿಗೆ ಒಳಪಡುವ ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳನ್ನು ನೇಮಕ ಮಾಡಿದೆ.

ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಈ ಮಹತ್ವದ ನೇಮಕಾತಿ ಆದೇಶ ಹೊರಡಿಸಲಾಗಿದೆ.

ಚುನಾವಣೆ ಕಾರ್ಯಗಳನ್ನು ಸಮರ್ಥವಾಗಿ ನಿರ್ವಹಿಸಲು ಹಾಗೂ ಕ್ಷೇತ್ರಮಟ್ಟದಲ್ಲಿ ಸಂಘಟನೆ ಬಲಪಡಿಸಲು ಈ ಉಸ್ತುವಾರಿಗಳನ್ನು ನಿಯೋಜಿಸಲಾಗಿದ್ದು, ಪ್ರತಿ ಪ್ರಾಧಿಕಾರ ಮತ್ತು ವಿಧಾನಸಭಾ ಕ್ಷೇತ್ರದಲ್ಲಿ ಸಮನ್ವಯ ಸಾಧಿಸಿ ಕಾರ್ಯಚಟುವಟಿಕೆಗಳನ್ನು ವೇಗಗೊಳಿಸುವ ಉದ್ದೇಶ ಹೊಂದಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande