ಕೇಂದ್ರ ಮತ್ತು ರಾಜ್ಯದ ಸಹಕಾರದಿಂದ ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನ: ಬೊಮ್ಮಾಯಿ
ಹಾವೇರಿ, 22 ಮಾರ್ಚ್ (ಹಿ.ಸ.): ಆ್ಯಂಕರ್: ಭದ್ರಾ ಮೇಲ್ದಂಡೆ ಯೋಜನೆಗೆ ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಒಪ್ಪಿಗೆ ನೀಡಿದೆ. ಆದಷ್ಟು ಬೇಗನೇ ಈ ಯೋಜನೆಗೆ ಕಾಯಕಲ್ಪ ಆಗುತ್ತದೆ. ಕೇಂದ್ರ ಮತ್ತು ರಾಜ್ಯದ ಸಹಕಾರದಿಂದ ಭದ್ರಾ ಮೇಲ್ದಂಡೆ ಯೋಜನೆ ಯಶಸ್ವಿಯಾಗುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ
BsB


ಹಾವೇರಿ, 22 ಮಾರ್ಚ್ (ಹಿ.ಸ.):

ಆ್ಯಂಕರ್:

ಭದ್ರಾ ಮೇಲ್ದಂಡೆ ಯೋಜನೆಗೆ ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಒಪ್ಪಿಗೆ ನೀಡಿದೆ. ಆದಷ್ಟು ಬೇಗನೇ ಈ ಯೋಜನೆಗೆ ಕಾಯಕಲ್ಪ ಆಗುತ್ತದೆ. ಕೇಂದ್ರ ಮತ್ತು ರಾಜ್ಯದ ಸಹಕಾರದಿಂದ ಭದ್ರಾ ಮೇಲ್ದಂಡೆ ಯೋಜನೆ ಯಶಸ್ವಿಯಾಗುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಪಟ್ಟಣ ಪಂಚಾಯತ ವತಿಯಿಂದ ನಿರ್ಮಿಸಲಾದ ಕುಮದ್ವತಿ ವಾಣಿಜ್ಯ ಸಂಕೀರ್ಣದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಮಾತನಾಡಿದರು. ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ವಾಣಿಜ್ಯ ಸಂಕೀರ್ಣ ಇವತ್ತು ಉದ್ಘಾಟನೆ ಆಗುತ್ತಿರುವುದು ಸಂತಸದ ಸಂಗತಿ, ಶಾಸಕರು ಆಸಕ್ತಿ ವಹಿಸಿ ಪೂರ್ಣಗೊಳಿಸಿದ್ದಾರೆ. ಹೆಚ್ಚಿನ ಆದಾಯ ಬಂದು ಪಟ್ಟಣ ಪಂಚಾಯತಿಗೆ ಅನುಕೂಲವಾಗುತ್ತದೆ. ಪಟ್ಟಣ ಪಂಚಾಯತಿ ಸದಸ್ಯರು ಮತ್ತು ಶಾಸಕರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ರಟ್ಟಿಹಳ್ಳಿ ಈಗ ತಾಲೂಕು ಪಂಚಾಯತಿ, 1998 ರಲ್ಲಿ ನಾನು ವಿಧಾನ ಪರಿಷತ್ತಿಗೆ ಚುನಾವಣೆಗೆ ನಿಂತಾಗ ರಟ್ಟಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಬಂದು ಚುನಾವಣಾ ಪ್ರಚಾರ ಮಾಡಿದ್ದೆ. ಆಗ ಎಲ್ಲರೂ ಪಕ್ಷಾತೀತವಾಗಿ ಸಹಾಯ ಮಾಡಿದ್ದರು. ಈ ಊರು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿಯಾಗಲು ಎಲ್ಲ ಅವಕಾಶಗಳಿವೆ. ತಾಲೂಕಾ ಕೇಂದ್ರಕ್ಕೆ ಬೇಕಾಗಿರುವ ಆಡಳಿತ ಸಂಕೀರ್ಣ, ಆಸ್ಪತ್ರೆ, ಕಾಲೇಜು, ಮಿನಿ ವಿಧಾನಸೌಧ ಆಗುವ ಅವಶ್ಯಕತೆ ಇದೆ. ಇದರ ಜೊತೆಗೆ ಊರಿನ ಅಭಿವೃದ್ಧಿ ಯೋಜನಾ ಬದ್ಧವಾಗಿ ಆಗಬೇಕು. ಪಟ್ಟಣ ಪಂಚಾಯತಿ ಸದಸ್ಯರು ಯೋಜನೆಯನ್ನು ಸಂಪೂರ್ಣವಾಗಿ ಮನಗಂಡು ವಿಸ್ತರಣೆ ಮಾಡಿದರೆ ಜನ ಮೆಚ್ಚುತ್ತಾರೆ. ಇಲ್ಲದಿದ್ದರೆ ಹಳೆ ಊರು ಆದಂಗೆ ಆಗುತ್ತದೆ. ಯೋಜನಾ ಬದ್ಧವಾಗಿ ಅಭಿವೃದ್ಧಿ ಮಾಡುವುದು ಅವಶ್ಯಕತೆ ಇದೆ. ನಮ್ಮ ಕಾಲದಲ್ಲಿ ಸುಮಾರು 7 ಸಾವಿರ ಕೋಟಿ ರೂ. ಪಟ್ಟಣ ಪಂಚಾಯತಿ, ಪುರಸಭೆಗೆ ಹಣ ಕೊಟ್ಟಿದ್ದೇವು. ನ್ಯಾಯಸಮ್ಮತವಾಗಿ ಹಣ ರಟ್ಟಿಹಳ್ಳಿ, ಹಿರೆಕೆರೂರು, ರಾಣೆಬೆನ್ನೂರು ಸೇರಿದಂತೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ಸ್ಟೇಟ್ ಫೈನಾನ್ಸ್ ಕಮಿಷನ್ ಶಿಫಾರಸ್ಸು ಮಾಡಿರುವ ಹಣ್ಣ ಬಂದಿಲ್ಲ. ಅದು ಬಂದರೆ ದೊಡ್ಡ ಪ್ರಮಾಣದಲ್ಲಿ ಹಣ ಬರುತ್ತದೆ. ಅದನ್ನು ತರಲು ಶಾಸಕರೊಂದಿಗೆ ಕೈ ಜೋಡಿಸಲು ನಾನು ಸಿದ್ಧನಿದ್ದೇನೆ ಎಂದು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande