ವಿಷ ಸೇವನೆ: ತಾಯಿ ಹಾಗೂ ಇಬ್ಬರು ಮಕ್ಕಳು ಆಸ್ಪತ್ರೆಗೆ ದಾಖಲು – ಒಂದು ಮಗು ಸಾವು
ಬಾಗಲಕೋಟೆ, 22 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಬದಾಮಿ ನಗರದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ವಿಷ ಸೇವಿಸಿದ ಘಟನೆ ನಡೆದಿದ್ದು, ಮೂವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ವೇಳೆ ಒಂದು ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ, ತಾಯಿ ಮತ
ವಿಷ ಸೇವನೆ: ತಾಯಿ ಹಾಗೂ ಇಬ್ಬರು ಮಕ್ಕಳು ಆಸ್ಪತ್ರೆಗೆ ದಾಖಲು – ಒಂದು ಮಗು ಸಾವು


ಬಾಗಲಕೋಟೆ, 22 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಬದಾಮಿ ನಗರದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ವಿಷ ಸೇವಿಸಿದ ಘಟನೆ ನಡೆದಿದ್ದು, ಮೂವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ವೇಳೆ ಒಂದು ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ, ತಾಯಿ ಮತ್ತು ಇಬ್ಬರು ಮಕ್ಕಳು ವಿಷ ಸೇವಿಸಿದ ಹಿನ್ನೆಲೆಯಲ್ಲಿ ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಒಂದು ಮಗು ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ತಾಯಿ ಮತ್ತು ಮತ್ತೊಂದು ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಘಟನೆಯ ಮಾಹಿತಿ ತಿಳಿದು ಸ್ಥಳೀಯ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಆರಂಭಿಸಿದ್ದಾರೆ.

ವಿಷ ಸೇವನೆಗೆ ಕೌಟುಂಬಿಕ ಕಲಹ ಎಂದು ಹೇಳಲಾಗುತ್ತಿದೆ ಆದರೆ ನಿಖರ ಕಾರಣ ಏನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

ಈ ಘಟನೆ ಬದಾಮಿ ನಗರದಲ್ಲಿ ಆತಂಕ ಮತ್ತು ದುಃಖದ ವಾತಾವರಣಕ್ಕೆ ಕಾರಣವಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande